ಉಡುಪಿ ನಗರಸಭೆ ಸಾಮಾನ್ಯ ಸಭೆಯ ಸಿಂಧುತ್ವ ಪ್ರಶ್ನಿಸಿ ಮನವಿ

Update: 2020-11-24 15:08 GMT

ಉಡುಪಿ, ನ.24: ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಉಡುಪಿ ನಗರಸಭೆಯ ಸಾಮಾನ್ಯ ಸಭೆಯ ಸಿಂಧುತ್ವವನ್ನು ಪ್ರಶ್ನಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನ.24ರಂದು ಪೌರಾಯುಕ್ತರು ಹಾಗೂ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಹೈಕೋರ್ಟ್ ಏಕ ಸದಸ್ಯ ಪೀಠ ಇತ್ತೀಚೆಗೆ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ನ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆ ಯನ್ನು ರದ್ದುಗೊಳಿಸಿ ಆದೇಶ ನೀಡಿದೆ. ರೋಸ್ಟರ್ ಪದ್ದತಿಯನ್ನು ಅನುಸರಿಸಿ ಅಧ್ಯಕ್ಷರ ಉಪಾಧ್ಯಕ್ಷರ ಯಾದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರಕಾರಕ್ಕೆ ಆದೇಶಿಸಿದೆ. ಆ ಪ್ರಕಾರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪ್ರಸ್ತುತ ಹುದ್ದೆ ಅಮಾನತುಗೊಂಡಿರುವು ದರಿಂದ ಅವರಿಗೆ ಯಾವುದೇ ಅಧಿಕಾರಿಗಳ ಸಭೆ, ಸಾಮಾನ್ಯ ಸಭೆ ನಡೆಸಲು ಸಾಂವಿಧಾನಿಕ ಹಕ್ಕು ಇರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಉಡುಪಿ ನಗರಸಭೆಯು ಈಗಾಗಲೇ ನ.26ರಂದು ಸಾಮಾನ್ಯ ಸಭೆ ನಡೆ ಯುವ ಬಗ್ಗೆ ಎಲ್ಲಾ ನಗರಸಭಾ ಸದಸ್ಯರಿಗೆ ಹಾಗೂ ಸಂಬಂಧಪಟ್ಟ ವರಿಗೆ ಕಾರ್ಯಸೂಚಿಯನ್ನು ವಿತರಿಸಿದೆ. ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಈ ಸಾಮಾನ್ಯ ಸಭೆಯ ಸಿಂಧುತ್ವದ ಬಗ್ಗೆ ಸ್ಪಷ್ಟ ಉತ್ತರ ನೀಡಬೇಕೆಂದು ಬ್ಲಾಕ್ ಕಾಂಗ್ರೆಸ್ ಮನವಿಯಲ್ಲಿ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಣ್ಣಯ್ಯ ಶೇರಿಗಾರ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್, ನಗರಸಭಾ ಸದಸ್ಯರಾದ ಅಮೃತಾ ಕೃಷ್ಣಮೂರ್ತಿ, ರಮೇಶ್ ಕಾಂಚನ್, ಸೆಲಿನ್ ಕರ್ಕಡ, ವಿಜಯ ಪೂಜಾರಿ, ಮಾಜಿ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ, ಯುವರಾಜ್, ಮುಖಂಡರಾದ ಯತೀಶ್ ಕರ್ಕೆರಾ, ಮಿಥುನ್ ಅಮೀನ್, ಅಬುಬಕರ್, ಸಾಯಿರಾಜ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News