ವಿವಿಧ ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಿಸಿ ರಾಜ್ಯ ಸರಕಾರ ಆದೇಶ

Update: 2020-11-24 16:25 GMT

ಬೆಂಗಳೂರು, ನ.24: ರಾಜ್ಯ ಸರಕಾರವು ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ವಿಧಾನಪರಿಷತ್ ಮಾಜಿ ಸದಸ್ಯೆ ತಾರಾ ಅನುರಾಧಾ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ದುರ್ಯೋಧನ ಐಹೊಳೆ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎಚ್.ಹನುಮಂತಪ್ಪ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾಗಿ ಎಂ.ರಾಮಚಂದ್ರ, ರಾಜ್ಯ ಆದಿ ಜಾಂಭವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಿ.ಮುನಿಕೃಷ್ಣರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ರಘು ಆರ್.(ಕೌಟಿಲ್ಯ), ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಗಿ ಬಾಬು ಪತ್ತಾರ್, ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜಿ.ಕೆ.ಗಿರೀಶ್ ಉಪ್ಪಾರ್, ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎಸ್.ನರೇಶ್ ಕುಮಾರ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಕಿರಣ್ ಕುಮಾರ್, ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ ಅಧ್ಯಕ್ಷರಾಗಿ ತಮ್ಮೇಶ್ ಗೌಡ, ರಾಜ್ಯ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನಿತೀನ್ ಕುಮಾರ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News