ಮುಸ್ಲಿಮ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

Update: 2020-11-24 16:36 GMT

ರಾಮನಗರ, ನ.24: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಬಿ.ಎಡ್/ಡಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಮ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಹೊಸ ಮತ್ತು ನವೀಕರಣ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್‍ನಿಂದ ಮಾನ್ಯತೆ ಪಡೆದಿರುವ ಡಿ.ಎಡ್ ಹಾಗೂ ಡಿಪಾರ್ಟ್‍ಮೆಂಟ್ ಆಫ್ ಸ್ಟೇಟ್ ಎಜುಕೇಷನಲ್ ರಿಸರ್ಚ್ ಮತ್ತು ಟ್ರೈನಿಂಗ್‍ನಿಂದ ಮಾನ್ಯತೆ ಪಡೆದಿರುವ ಡಿ.ಎಡ್ ಕೋರ್ಸ್‍ಗಳ ಸರಕಾರಿ/ಅರೆ ಸರಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ. ವಿದ್ಯಾರ್ಥಿಗಳು ಡಿ.ಎಡ್ ಮತ್ತು ಬಿ.ಎಡ್ ಕೋರ್ಸುಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲ್ಲ ಅಧಿಕೃತ ದಾಖಲಾತಿಗಳನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸುವ ಪೋಷಕರ ವರಮಾನ ವಾರ್ಷಿಕ ಗರಿಷ್ಠ 6 ಲಕ್ಷ ರೂ.ಗಳಿಗೆ ಮೀರಿರಬಾರದು. ಹಿಂದಿನ ತರಗತಿಯಲ್ಲಿ ವಾರ್ಷಿಕ/ಸೆಮಿಸ್ಟರ್ ಗಳಲ್ಲಿ ಶೇ.50 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. ಅರ್ಜಿಗಳನ್ನು ಇಲಾಖಾ ವೆಬ್‍ಸೈಟ್ https://dom.karnataka.gov.in ರಲ್ಲಿ ಪಡೆದು ಭರ್ತಿಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳೊಂದಿಗೆ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಶ್ರೀ ರಾಮ್ ಕಾಂಪ್ಲೆಕ್ಸ್, ವಿನಾಯಕನಗರ, ಬಿ.ಎಂ.ರಸ್ತೆ, ರಾಮನಗರ-562 159 ಇಲ್ಲಿಗೆ ಡಿಸೆಂಬರ್ 5ರೊಳಗಾಗಿ ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News