ಭಟ್ಕಳ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ

Update: 2020-11-24 16:45 GMT

ಭಟ್ಕಳ: ಭಟ್ಕಳ ನಗರ ಹಾಗೂ ಗ್ರಾಮೀಣ ಪೊಲೀಸ್‍ ಠಾಣೆಯಿಂದ ಸೋಮವಾರ ಸಂಜೆ ಇಲ್ಲಿನ ಶಮ್ಸುದ್ದೀನ್ ವೃತ್ತದಲ್ಲಿ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಪ್ರಬಾರಿ ಸಿ.ಪಿ.ಐ ನಿಶ್ಚಲ್‍ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರತಿವರ್ಷ ಪೊಲೀಸ್ ಇಲಾಖೆ ರಸ್ತೆ ಸುರಕ್ಷತಾ ಸಪ್ತಾಹ ಆಚರಿಸುತ್ತಿದೆ. ಈ ಮೂಲಕ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಮತ್ತು ಜಾಗ್ರತೆಯ ಕುರಿತು ಅರಿವು ಮೂಡಿಸಲಾಗುತ್ತದೆ ಎಂದರು.

ಅಜಾಗರೂಕ ಚಾಲನೆಯು ಅಪಾಯದೊಂದಿಗೆ ಜೀವ ಹಾನಿಗೂ ಕಾರಣವಾಗುತ್ತದೆ. ಯಾವುದೇ ರೀತಿಯ ವಾಹನ ಚಾಲನೆ ಮಾಡುವಾಗ ಸುರಕ್ಷಿತ ಚಾಲನೆ, ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಈ ಕುರಿತು ಪ್ರತಿಯೊಬ್ಬರು ಜಾಗೃತರಾಗಿ, ಇತರರಿಗೂ ಜಾಗೃತಿ ಮೂಡಿಸಬೇಕು. ನ.23ರಿಂದ ನ30ರ ವರೆಗೆ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆಯಲ್ಲಿರುವದು ಈ ಕಾರ್ಯಕ್ರಮಕ್ಕೆ ಸಾರ್ವಜನಿಕರೆಲ್ಲರೂ ತಮ್ಮ ಸಹಕಾರವನ್ನು ನೀಡಬೇಕು ಎಂದರು.

ಪಿ.ಎಸ್.ಐ ಹನುಮಂತಪ್ಪ ಕುಡಗುಂಟಿ, ಗ್ರಾಮೀಣ ಠಾಣೆ ಪಿ.ಎಸ್.ಐ ಓಂಕಾರಪ್ಪ, ಎ.ಎಸ್.ಐ ನವೀನ ಬೋರ್ಕರ್,ರಾಮಚಂದ್ರ ವೈದ್ಯ, ರಾಮಚಂದ್ರ ನಾಯ್ಕ, ಸೇರಿ ಇತರ ಪೊಲೀಸ್ ಸಿಬ್ಬಂದಿ ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News