ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ರಾಮನ ಹೆಸರು: ಉತ್ತರಪ್ರದೇಶ ಸಂಪುಟ ಅನುಮೋದನೆ

Update: 2020-11-25 07:37 GMT

ಲಕ್ನೊ: ಅಯೋಧ್ಯೆಯಲ್ಲಿರುವ ವಿಮಾನ ನಿಲ್ದಾಣಕ್ಕೆ ಶ್ರೀ ರಾಮನ ಹೆಸರಿಡುವ ಪ್ರಸ್ತಾಪಕ್ಕೆ ಉತ್ತರಪ್ರದೇಶದ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.

ಅಯೋಧ್ಯೆ ವಿಮಾನ ನಿಲ್ದಾಣವನ್ನು ಮರ್ಯಾದ ಪುರುಷೋತ್ತಮ ಶ್ರೀರಾಮ್ ವಿಮಾನ ನಿಲ್ದಾಣ ಎಂದು ಮರು ನಾಮಕರಣ ಮಾಡುವ ಪ್ರಸ್ತಾಪಕ್ಕೆ ತನ್ನ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ರಾಜ್ಯ ಸರಕಾರ ತಿಳಿಸಿದೆ.

ಈ ಕುರಿತ ಪ್ರಸ್ತಾಪವನ್ನು ಈಗ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ.

ಪ್ರಸ್ತುತ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ ಎಂದು ಉತ್ತರಪ್ರದೇಶ ಸರಕಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.

ರಾಜ್ಯ ಸರಕಾರವು ಅಯೋಧ್ಯೆ ನಗರದ ಅಭಿವೃದ್ದಿಗೆ ಹಾಗೂ ಜಾಗತಿಕ ಧಾರ್ಮಿಕ ಪ್ರವಾಸೋದ್ಯಮ ತಾಣವಾಗಿ ಮಾಡಲು ಅದರ ಪ್ರಚಾರದಲ್ಲಿ ತೊಡಗಿದೆ. ಅಯೋಧ್ಯೆಯ ಸಂರಕ್ಷಣೆ, ಪ್ರವಾಸೋದ್ಯಮ ಹಾಗೂ ಮೂಲಸೌಕರ್ಯಗಳ ಒಟ್ಟಾರೆ ಅಭಿವೃದ್ದಿಗೆ ಜಾಗತಿಕ ಸಲಹೆಗಾರರನ್ನು ನೇಮಿಸಲಾಗುವುದು ಎಂದು 'ಹಿಂದೂಸ್ತಾನ್ ಟೈಮ್ಸ್' ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News