ಅಹ್ಮದ್ ಪಟೇಲ್ ನಿಧನಕ್ಕೆ ಜನಾರ್ದನ ಪೂಜಾರಿ ಸಂತಾಪ

Update: 2020-11-25 09:32 GMT

ಮಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ರಾಜ್ಯಸಭಾ ಸದಸ್ಯ, ನನ್ನ ಆಪ್ತ ಮಿತ್ರರಾದ ಅಹ್ಮದ್ ಪಟೇಲ್ ರವರ ನಿಧನದ ವಾರ್ತೆ ಕೇಳಿ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನವು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ  ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಯವರಿಗೆ ಪರಮಾಪ್ತರಾಗಿದ್ದು ಕೊಂಡು, ಪಕ್ಷಕ್ಕೆ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬದವರಿಗೂ, ಅಭಿಮಾನಿಗಳಿಗೂ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸು ತ್ತೇನೆ ಎಂದು  ಜನಾರ್ದನ ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News