ರಾಜ್ಯ ಸರಕಾರ ಸರ್ವಾಧಿಕಾರಿ ಧೋರಣೆ ಸರಿಯಲ್ಲ: ಲಲಿತಾ ನಾಯಕ್

Update: 2020-11-25 13:33 GMT

ಬೆಂಗಳೂರು, ನ.25: ಮರಾಠ ಅಭಿವೃದ್ದಿ ನಿಗಮ ಸ್ಥಾಪನೆ ಬೇಡವೆಂದು ಕನ್ನಡಪರ ಸಂಘಟನೆಗಳು ಒತ್ತಾಯ ಮಾಡುತ್ತಿವೆ. ಆದರೂ ರಾಜ್ಯ ಸರಕಾರ ಸರ್ವಾಧಿಕಾರಿ ಧೋರಣೆಯಂತೆ ವರ್ತಿಸುತ್ತಿದೆ ಎಂದು ಮಾಜಿ ಸಚಿವೆ ಲಲಿತಾ ನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ಡಿ.5ರಂದು ರಾಜ್ಯ ಬಂದ್ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೋಟೆಲ್‍ನಲ್ಲಿ ಕನ್ನಡಪರ ಸಂಘಟನೆಗಳು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ನಿರಂತರವಾಗಿ ಹೋರಾಟ ಮಾಡುತ್ತಿವೆ. ಆದರೂ ರಾಜ್ಯ ಸರಕಾರ ಮಾತ್ರ ಕನ್ನಡಿಗರ ಹೋರಾಟವನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯ ಹಿಂದೆ ರಾಜಕೀಯ ಸ್ವಾರ್ಥವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಆದರೂ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನತೆಯನ್ನು ಕುರಿ ಮಾಡಲು ಹೊರಟ್ಟಿದ್ದಾರೆ. ಇದೆಲ್ಲವನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆಂದು ಅವರು ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News