ಆರ್.ರೋಷನ್ ಬೇಗ್‍ಗೆ ಮತ್ತೆ 3 ದಿನ ಸಿಸಿಬಿ ಕಸ್ಟಡಿ ವಿಧಿಸಿ ಕೋರ್ಟ್ ಆದೇಶ

Update: 2020-11-25 13:46 GMT

ಬೆಂಗಳೂರು, ನ.25: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್.ರೋಷನ್ ಬೇಗ್‍ಗೆ ಮತ್ತೆ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿ ವಿಧಿಸಿ ಕೋರ್ಟ್ ಆದೇಶಿಸಿದೆ.

ಐಎಂಎ ಪ್ರಕರಣದಲ್ಲಿ ಮನ್ಸೂರ್ ಖಾನ್‍ನಿಂದ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದಾರೆಂಬ ಆರೋಪದ ಹಿನ್ನೆಲೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ರೋಷನ್ ಬೇಗ್ ಅವರನ್ನು ನ.28ರವರೆಗೆ ಸಿಬಿಐ ಕಸ್ಟಡಿಗೆ ನೀಡಿ ಸಿಬಿಐ ವಿಶೇಷ ಕೋರ್ಟ್‍ನ ನ್ಯಾಯಾಧೀಶೆ ಮಂಜುಳ ಇಟ್ಟಿ ಆದೇಶಿಸಿದ್ದಾರೆ.

ನ.28 ರಂದು ಬೆಳಿಗ್ಗೆ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದ ಕೋರ್ಟ್ ಮಧ್ಯೆ ನ.27ಕ್ಕೆ ಜಾಮೀನಿಗೆ ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಿದೆ. ಇದೇ ವೇಳೆ ಬೇಗ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News