ನಾಡಿನ ಉಳಿವಿಗಾಗಿ ಕನ್ನಡಿಗರೆಲ್ಲರೂ ಒಗ್ಗಟ್ಟಾಗಬೇಕಿದೆ: ರಾಜೇಗೌಡ

Update: 2020-11-25 15:21 GMT

ಚಿಕ್ಕಮಗಳೂರು, ನ.25: ಕನ್ನಡ ನಾಡಿನ ನೆಲ-ಜಲ ಭಾಷೆಯ ವಿಷಯದಲ್ಲಿ ಕನ್ನಡಿಗರೆಲ್ಲರೂ ಒಗ್ಗಟ್ಟಿನ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ರಾಜೇಗೌಡ ಕರೆ ನೀಡಿದರು.

ನಗರದ ವಿಜಯಪುರದಲ್ಲಿ ಕನ್ನಡ ಸೇನೆ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಎಲ್ಲಡೆ ಈ ಬಾರಿಯ ಕನ್ನಡ ರಾಜ್ಯೋತ್ಸವನ್ನು ವಿಜೃಂಭಣೆಯಿಂದ ಸರಳವಾಗಿ ಆಚರಿಸಲಾಗುತ್ತಿದೆ ಕನ್ನಡ ನಾಡಿನಲ್ಲಿ ಜೀವಿಸುವ ಪ್ರತಿಯೊಬ್ಬರು ನೆಲ-ಜಲ ಭಾಷೆಯ ವಿಚಾರ ಬಂದಾಗ ಎಲ್ಲರೂ ಒಗ್ಗಟ್ಟಾಗಿ ಅವುಗಳ ಉಳಿವಿಗಾಗಿ ಹೋರಾಡಬೇಕು ಎಂದರು.

ಕನ್ನಡವನ್ನು ಹೆಚ್ಚು ಬಳಕೆ ಮಾಡುವ ಮೂಲಕ ಭಾಷೆಯ ಉಳಿವಿಗಾಗಿ ಎಲ್ಲರೂ ಮುಂದಾಗಬೇಕು. ಇದರಲ್ಲಿ ರಾಜಕಾರಣಿಗಳು ಯಾವುದೇ ಪಕ್ಷಪಾತವಿಲ್ಲದೇ ಕನ್ನಡಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಿ ಇದರ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದ ಅವರು, ರಾಜ್ಯದಲ್ಲಿ ಕನ್ನಡಕ್ಕೆ ಹೆಚ್ಚು ಪ್ರಾದನ್ಯತೆ ನೀಡಿ ಸರಕಾರವು ಶೇ.75ರಷ್ಟು ಉದ್ಯೋಗವಕಾಶಗಳನ್ನು ಕನ್ನಡಿಗರಿಗೆ ನೀಡಬೇಕು. ಇದಕ್ಕಾಗಿ ಎಲ್ಲಾ ರಾಜಕೀಯ ನಾಯಕರು ಪಕ್ಷಭೇದ ಮರೆತು ಒಂದಾಗಿ ಕನ್ನಡ ನಾಡಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ಕೋಟೆ ವಿನಯ್ ಮಾತನಾಡಿ, ಕನ್ನಡ ರಾಜ್ಯೋತ್ಸವವು ಕೇವಲ ನವೆಂಬರ್ ತಿಂಗಳಿಗೆ ಸೀಮಿತವಾಗದೇ ಪ್ರತಿ ದಿನವೂ ಹಬ್ಬದಂತೆ ಆಚರಣೆ ಮಾಡಬೇಕು. ಶಾಲೆ ಕಾಲೇಜುಗಳಲ್ಲಿ ಕನ್ನಡ ಭಾಷೆಗೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು ಎಂದ ಅವರು ಕೋವಿಡ್-19 ಹಿನ್ನೆಲೆ ಶಿಕ್ಷಣ ಕಲಿಕೆಗೆ ಹಿನ್ನಡೆಯಾಗಿದ್ದು ಕನ್ನಡ ಭಾಷೆಯ ಏಳಿಗೆಗೆ ಪ್ರಾಮುಖ್ಯತೆ ನೀಡಿ ವಿದ್ಯಾರ್ಥಿಗಳಲ್ಲಿ ಕನ್ನಡಭಿಮಾನವನ್ನು ಬೆಳೆಸಬೇಕು ಎಂದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಹೋಳಿಗೆ ಮಲ್ಲೇಶಪ್ಪ ಮತ್ತು ಬೀದಿ ಬದಿಯ ವ್ಯಾಪರಸ್ಥರ ಸಂಘದ ಅಧ್ಯಕ ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಸೇನೆಯ ಕಳವಾಸೆ ರವಿ, ಜಯಪ್ರಕಾಶ್, ರುದ್ರೇಶ್, ಶಂಕರೇಗೌಡ, ಹೋಳಿಗೆ ಮಲ್ಲೇಶಪ್ಪ, ಗಣೇಶ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News