ಎನ್‌ಎಸ್‌ವಿ ಸಪ್ತಾಹ

Update: 2020-11-25 15:22 GMT

ಉಡುಪಿ, ನ.25: ಸರಕಾರಿ ನೌಕರರು ಎನ್‌ಎಸ್‌ವಿ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಂಡರೆ ಒಂದು ವಿಶೇಷ ಭತ್ಯೆಯು ಸಿಗುತ್ತದೆ ಹಾಗೂ ಉಳಿದವರಿಗೆ ಇದು ಮಾದರಿ ಆಗಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಎನ್‌ಎಸ್‌ವಿ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಯುವ ಸಭೆಯಲ್ಲಿ ಎನ್‌ಎಸ್‌ವಿ ಪಾಕ್ಷಿಕ ಆಚರಣೆ ಮಾಡಬೇಕು. ಉಡುಪಿ ಜಿಲ್ಲಾಸ್ಪತ್ರೆ ಹಾಗೂ ಬೈಂದೂರು ಸಮುದಾಯ ಆಸ್ಪತ್ರೆಯನ್ನು ಎನ್‌ಎಸ್‌ವಿ ಶಸ್ತ್ರಚಿಕಿತ್ಸೆ ನಡೆಸಲು ಸಜ್ಜಾಗಿ ಇರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ, ಜಿಲ್ಲಾ ಸರ್ಜನ್ ಮಧುಸೂದನ್, ತಾಲೂಕು ಆಸ್ಪತ್ರೆ ಶಸ್ತ್ರಚಿಕಿತ್ಸಕರು, ಉಡುಪಿ, ಕುಂದಾಪುರ, ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಶುಶ್ರೂಷಕ ಸುಬ್ರಮಣ್ಯ ಸ್ವಾಗತಿಸಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮರಾವ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News