​ನಗರಸಭೆ, ಪುರಸಭೆ, ಪ.ಪ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ರದ್ದು ಮಾಡಿದ ಆದೇಶಕ್ಕೆ ಹೈಕೋರ್ಟ್ ತಡೆ

Update: 2020-11-25 17:04 GMT

ಬೆಂಗಳೂರು, ನ.25: ರಾಜ್ಯದ ಎಲ್ಲ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ಅಧಿಸೂಚನೆ ರದ್ದುಗೊಳಿಸಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶಕ್ಕೆ ಬುಧವಾರ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಮೀಸಲಾತಿ ಅಧಿಸೂಚನೆ ರದ್ದುಗೊಳಿಸಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗರತ್ನ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಅಧಿಸೂಚನೆ ರದ್ದುಗೊಳಿಸಿ ಕೆಲ ದಿನಗಳ ಹಿಂದೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಆದೇಶ ಹೊರಡಿಸಿತ್ತು. 

ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದ ವಿಭಾಗೀಯ ನ್ಯಾಯಪೀಠವು ಹಾಸನ, ಅರಸಿಕೇರೆ, ಕೆ.ಆರ್.ಪೇಟೆ, ಚನ್ನಗಿರಿ, ಹರಿಹರ ನಗರ ಸ್ಥಳೀಯ ಸಂಸ್ಥೆಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶ ಮುಂದುವರಿಯಲಿದೆ ಎಂದು ಹೇಳಿದೆ. ಅರ್ಜಿ ವಿಚಾರಣೆಯನ್ನು ಜನವರಿಗೆ ಮುಂದೂಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News