ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Update: 2020-11-25 17:33 GMT

ಬೆಂಗಳೂರು, ನ.25: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನೆಯಡಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 9 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 10 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿ.21, 2020 ಕೊನೆಯ ದಿನಾಂಕವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ ವಿಳಾಸ: www.anganawadirecruit.kar.nic.in ಮತ್ತು  ದೂ-080-26601917ನ್ನು ಹಾಗೂ ಕಛೇರಿ ವಿಳಾಸ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬೆಂಗಳೂರು ರಾಜ್ಯ ಯೋಜನೆ, ಒಂದನೇ ಮಹಡಿ, ಬಿಬಿಎಂಪಿ ಕಟ್ಟಡ, ಹೆರಿಗೆ ಆಸ್ಪತ್ರೆ ಸಮೀಪ ಎನ್.ಆರ್. ಕಾಲೋನಿ, ಬೆಂ-19 ನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News