ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆ

Update: 2020-11-25 17:36 GMT

ಬೆಂಗಳೂರು, ನ. 25: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಿಗೆ ಮೀಸಲಾತಿ ಹೆಚ್ಚಳ ಸಂಬಂಧ ಪರಾಮರ್ಶಿಸಲು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ.

ಸಚಿವ ಸಂಪುಟ ಉಪ ಸಮಿತಿ ಸದಸ್ಯರನ್ನಾಗಿ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ಎಸ್ಸಿ-ಎಸ್ಟಿ)ಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ಸಂಪುಟ ಉಪ ಸಮಿತಿ ರಚನೆಗೆ ತೀರ್ಮಾನಿಸಲಾಗಿತ್ತು. ಎಸ್ಸಿ-ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಸಮಿತಿ ರಾಜ್ಯ ಸರಕಾರಕ್ಕೆ ವರದಿಯನ್ನು ಸಲ್ಲಿಸಿತ್ತು.

ರಾಜ್ಯದಲ್ಲಿರುವ ಎಸ್ಸಿ-ಎಸ್ಟಿ ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿಗೆ ಶೇ.17ರಷ್ಟು, ಎಸ್ಟಿಗೆ ಶೇ.7.5ರಷ್ಟು ಒಟ್ಟು ಶೇ.24.5ರಷ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇತ್ತು. ಈ ಸಂಬಂಧ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿವಿಧ ಸಂಘಟನೆಗಳು, ರಾಜ್ಯ ಸರಕಾರದ ಮೇಲೆ ಒತ್ತಡವನ್ನು ಹೇರುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News