ನಿವಾರ್ ಚಂಡಮಾರುತ ಪರಿಣಾಮ: ರಾಜಧಾನಿ ಸಹಿತ ಹಲವೆಡೆ ಗಾಳಿ, ತುಂತುರು ಮಳೆ

Update: 2020-11-26 03:43 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.26: ನಿವಾರ್ ಚಂಡಮಾರುತ ನೆರೆಯ ರಾಜ್ಯವಾದ ತಮಿಳುನಾಡಿಗೆ ಬುಧವಾರ ತಡರಾತ್ರಿ ಅಪ್ಪಳಿಸಿದ್ದು, ಇದರ ಪರಿಣಾಮ ರಾಜಧಾನಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ತುಂತುರು ಮಳೆಯಾಗುತ್ತಿದೆ.

ಗುರುವಾರ ಬೆಳಗ್ಗೆಯಿಂದಲೇ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದ್ದು, ಸಂಜೆಯ ಬಳಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.

ನಿವಾರ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಸುರಿಯುವ ಸಂಭವವಿದೆ. ಬೆಂಗಳೂರು‌ ನಗರ,‌ ಗ್ರಾಮಾಂತರ, ಕೋಲಾರ‌, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಚಾಮರಾಜನಗರದಲ್ಲಿ ಭಾರೀ‌ ಮಳೆಯಾಗುವ ಸಾಧ್ಯತೆಯಿದೆ. ಅದೇರೋತಿ  ಕರಾವಳಿ ಭಾಗಗಳಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News