ದಿಲ್ಲಿ ಸಚಿವ ಗೋಪಾಲ್ ರೈಗೆ ಕೊರೋನ

Update: 2020-11-26 07:08 GMT

ಹೊಸದಿಲ್ಲಿ: ದಿಲ್ಲಿಯ ಪರಿಸರ ಸಚಿವ ಗೋಪಾಲ್ ರೈ ಅವರಿಗೆ ಕೊರೋನ  ಸೋಂಕು ತಗಲಿರುವುದು ಬುಧವಾರ ದೃಢಪಟ್ಟಿದೆ.

ಆಮ್ ಆದ್ಮಿ ಪಕ್ಷದ ಮುಖಂಡ ಇಂದು ಬೆಳಗ್ಗೆ ಟ್ವೀಟ್ ಮಾಡಿ ಈ ಮಾಹಿತಿ ನೀಡಿದರು. ತನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಕೊರೋನ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ನೇತೃತ್ವದ ದಿಲ್ಲಿ ಸರಕಾರದಲ್ಲಿ ಕೊರೋನ ಪಾಸಿಟಿವ್ ಆಗಿರುವ ಮೂರನೇ ಸಚಿವ ಗೋಪಾಲ್ ರೈ. ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹಾಗೂ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಅವರಿಗೆ  ಕ್ರಮವಾಗಿ ಸೆಪ್ಟಂಬರ್ ಹಾಗೂ ಜೂನ್‌ನಲ್ಲಿ ಕೊರೋನ ವೈರಸ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಪಡೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News