'ಪೊಲೀಸ್ ಪಡೆ ಸಮಸ್ಯೆಯನ್ನು ಪರಿಹರಿಸದು': ರೈತರ ಮೇಲೆ ಪೊಲೀಸ್ ಬಲಪ್ರಯೋಗಕ್ಕೆ ದೇವೇಗೌಡ ಆಕ್ರೋಶ

Update: 2020-11-26 11:24 GMT

ಹೊಸದಿಲ್ಲಿ, ನ.26: ಕೇಂದ್ರ ಸರಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ಎರಡು ದಿನಗಳ ದಿಲ್ಲಿ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲು ದಿಲ್ಲಿಯತ್ತ ತೆರಳುತ್ತಿದ್ದ ಸಾವಿರಾರು ರೈತರನ್ನು ಅಶ್ರುವಾಯು ಹಾಗೂ ಜಲಫಿರಂಗಿ ಪ್ರಯೋಗಿಸಿ ತಡೆಯಲೆತ್ನಿಸಿದ ಪೊಲೀಸರ ಕ್ರಮಕ್ಕೆ ಮಾಜಿ ಪ್ರಧಾನಿ ದೇವೆಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ''ದಿಲ್ಲಿಯ ರೈತ ಚಳವಳಿಯ ಫೋಟೋಗಳನ್ನು ನೋಡಿ ಬೇಸರವಾಯಿತು. ರೈತರನ್ನು ಗೌರವದಿಂದ ಕಾಣುವಂತೆ ಕೇಂದ್ರ ಸರ್ಕಾರವನ್ನು ಕೋರುತ್ತೇನೆ. ದಯವಿಟ್ಟು ಅವರೊಂದಿಗೆ ಮಾತನಾಡಿ. ಅವರ ಮಾತುಗಳನ್ನು ಕೇಳಿ. ಪೊಲೀಸ್ ಪಡೆ ಸಮಸ್ಯೆಯನ್ನು ಪರಿಹರಿಸದು'' ಎಂದು ತಿಳಿಸಿದ್ದಾರೆ.

ದಿಲ್ಲಿಯತ್ತ ಟ್ರಾಕ್ಟರ್‌ಗಳು ಹಾಗೂ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಸಾವಿರಾರು ರೈತರನ್ನು ಬಿಜೆಪಿ ಆಡಳಿತದ ಹರ್ಯಾಣ ಸರಕಾರದ ಭದ್ರತಾ ಸಿಬ್ಬಂದಿ ಹರ್ಯಾಣದ ಗಡಿಯಲ್ಲಿ ಬ್ಯಾರಿಕೇಡ್ ಹಾಕಿ ತಡೆದಿದ್ದಾರೆ. ಕೋಲು ಹಾಗೂ ಕತ್ತಿಗಳನ್ನು ಹಿಡಿದಿದ್ದ ಪಂಜಾಬ್‌ನ ಸಾವಿರಾರು ರೈತರು ಸೇತುವೆ ಬಳಿ ಅಡ್ಡಲಾಗಿ ಹಾಕಿದ್ದ ಬ್ಯಾರಿಕೇಡ್‌ಗಳನ್ನು ನದಿಗೆ ಎಸೆಯುವ ಮೂಲಕ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದ ಪೊಲೀಸರೊಂದಿಗೆ ಜಟಾಪಟಿ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News