​ಉಡುಪಿ: 26 ಮಂದಿಯಲ್ಲಿ ಕೊರೋನ ಸೋಂಕು ಪತ್ತೆ

Update: 2020-11-26 14:39 GMT

ಉಡುಪಿ, ನ. 26: ಜಿಲ್ಲೆಯಲ್ಲಿ ಗುರುವಾರ ಒಟ್ಟು 26 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. 21 ಮಂದಿ ಚಿಕಿತ್ಸೆಯಿಂದ ಗುಣಮುಖ ರಾದರೆ, ಸದ್ಯ 191 ಮಂದಿ ಕೊರೋನ ಪಾಸಿಟಿವ್‌ಗೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 14 ಮಂದಿ ಪುರುಷರು ಹಾಗೂ 12 ಮಂದಿ ಮಹಿಳೆಯರು. ಇವರಲ್ಲಿ ಆರು ಮಂದಿ ಪುರುಷರು ಹಾಗೂ ಎಂಟು ಮಂದಿ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 15, ಕುಂದಾಪುರ ತಾಲೂಕಿನ 4, ಕಾರ್ಕಳ ತಾಲೂಕಿನ ಐವ ರಲ್ಲಿ ಹಾಗೂ ಹೊರಜಿಲ್ಲೆಯ ಇಬ್ಬರಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ತಿಳಿಸಿದರು.

21 ಮಂದಿ ಗುಣಮುಖ: ಬುಧವಾರ ಜಿಲ್ಲೆಯಲ್ಲಿ 21 ಮಂದಿ ಚಿಕಿತ್ಸೆ ಬಳಿಕ ಸೋಂಕಿನಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 22,201 ಆಗಿದೆ. ಜಿಲ್ಲೆಯಲ್ಲಿ ಸದ್ಯ 191 ಮಂದಿ ಈಗಲೂ ಕೋವಿಡ್‌ಗೆ ಚಿಕಿತ್ಸೆಯಲ್ಲಿದ್ದಾರೆ ಎಂದರು.

2726 ನೆಗೆಟಿವ್: ಜಿಲ್ಲೆಯಲ್ಲಿ ಬುಧವಾರ ಒಟ್ಟು 2751 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 2726 ಮಂದಿ ನೆಗೆಟಿವ್ ಬಂದಿದ್ದಾರೆ. ಉಳಿದ 25(ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,579 ಕ್ಕೇರಿದೆ.

ಜಿಲ್ಲೆಯಲ್ಲಿ ಬುಧವಾರದವರೆಗೆ ಒಟ್ಟು 2,30,980 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,08,401 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಒಟ್ಟು 22,579 ಮಂದಿ ಪಾಸಿಟಿವ್ ಬಂದಿದ್ದರೆ, ಇವರಲ್ಲಿ 22,201 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 187 ಮಾತ್ರ.

ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ. ಹೀಗಾಗಿ ನ.7ರ ನಂತರ ಸತತ 19 ದಿನಗಳಿಂದ ಕೋವಿಡ್‌ಗೆ ಜಿಲ್ಲೆಯಲ್ಲಿ ಯಾರೂ ಬಲಿಯಾಗಿಲ್ಲ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News