ನ. 27: ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ

Update: 2020-11-26 15:08 GMT

ಮಂಗಳೂರು, ನ. 26: ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಮುಸ್ಲಿಮ್ ಲೇಖಕರ ಸಂಘವು ಕೊಡಮಾಡುವ 2018ನೇ ಸಾಲಿನ ರಾಜ್ಯ ಮಟ್ಟದ ದಿ.ಯು.ಟಿ. ಫರೀದ್ ಸ್ಮರಣಾರ್ಥ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ ಮತ್ತು ಬಹುಭಾಷಾ ಕವಿಗೋಷ್ಠಿ ನ.27ರಂದು ಸಂಜೆ 4 ಗಂಟೆಗೆ ನಡೆಯಲಿದೆ.

ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಸಮೀಪದ ಸಹಕಾರಿ ಸದನದಲ್ಲಿರುವ ಶಾಂತಿ ಪ್ರಕಾಶನ ಸಭಾಂಗಣದಲ್ಲಿ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಾಸಕ ಯು.ಟಿ. ಖಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಅಬ್ದುಲ್ ಸಲಾಮ್ ದೇರಳಕಟ್ಟೆ (ಕೃತಿ: ಮರೀಚಿಕೆ) ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಹಂಪಿ ಕನ್ನಡ ವಿ.ವಿ.ಯ ವಿಶ್ರಾಂತ ಪ್ರಾಧ್ಯಾಪಕ ಡಾ.ಚಂದ್ರ ಪೂಜಾರಿ ಅತಿಥಿಯಾಗಿ ಆಗಮಿಸಲಿದ್ದಾರೆ. ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಅಧ್ಯಕ್ಷತೆ ವಹಿಸಲಿದ್ದಾರೆ.

ಮುಹಮ್ಮದ್ ಬಡ್ಡೂರು ಬಹುಭಾಷಾ ಕವಿಗೋಷ್ಠಿ ಉದ್ಘಾಟಿಸಲಿದ್ದು, ಅತ್ರಾಡಿ ಅಮೃತಾ ಶೆಟ್ಟಿ, ರಾಜಾರಾಮ ವರ್ಮ ವಿಟ್ಲ ಹಾಗೂ ಇಮ್ರಾನುಲ್ಲಾ ಖಾನ್ ಮನ್ಸೂರಿ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News