ನಿವಾರ್ ಚಂಡಮಾರುತ ಪರಿಣಾಮ: ಬೆಂಗಳೂರಿನಲ್ಲಿ 2 ದಿನ ವಿದ್ಯುತ್‍ ವ್ಯತ್ಯಯ

Update: 2020-11-26 15:09 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ನ.26: ನಿವಾರ್ ಚಂಡಮಾರುತದ ಅಬ್ಬರದ ಹಿನ್ನೆಲೆ ನಗರದಲ್ಲಿ ಮುಂದಿನ 2 ದಿನ ವಿದ್ಯುತ್‍ನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ನಗರದಲ್ಲಿ ಶುಕ್ರವಾರದವರೆಗೂ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ನಗರದ ಹಲವು ಭಾಗಗಳಲ್ಲಿ ಬೆಸ್ಕಾಂ ಶುಕ್ರವಾರ ಮತ್ತು ಶನಿವಾರ ವಿದ್ಯುತ್ ಮಾರ್ಗಗಳ ದುರಸ್ತಿ ಕಾರ್ಯಗಳನ್ನು ನಡೆಸಲಿದೆ. ಮುಖ್ಯವಾಗಿ ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ವಿವೇಕಾನಂದ ನಗರ, ಶ್ರೀನಿವಾಸ ನಗರ, ಕತ್ರಿಗುಪ್ಪೆ ಪೂರ್ವ, ಕತ್ರಿಗುಪ್ಪೆ ಮುಖ್ಯರಸ್ತೆ, ಚೆನ್ನಮ್ಮನ ಕೆರೆ ಅಚ್ಚುಕಟ್ಟು, ಐಟಿಐ ಲೇಔಟ್, ವಿದ್ಯಾಪೀಠ ವೃತ್ತ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಶುಕ್ರವಾರ ವಿದ್ಯುತ್ ಕಡಿತವಾಗಲಿದೆ. ಹೊಸಕೆರೆಹಳ್ಳಿ, ಮೂಕಾಂಬಿಕ ನಗರ 7ನೇ ಬ್ಲಾಕ್, ಬನಶಂಕರಿ 3ನೇ ಹಂತ, ವೆಂಕಟಪ್ಪ ಲೇಔಟ್, ದತ್ತಾತ್ರೇಯ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News