ನ. 29: ಪಣಂಬೂರು ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನ

Update: 2020-11-26 16:21 GMT

ಮಂಗಳೂರು, ನ.26: ದ.ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಜಿಲ್ಲಾ ಪೌರರಕ್ಷಣಾ ಪಡೆಗಳ ಸಂಯುಕ್ತ ಆಶ್ರಯದಲ್ಲಿ ನ.29ರಂದು ಪಣಂಬೂರು ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ ಅಭಿಯಾನವು ಪಣಂಬೂರು ಕಡಲ ತೀರದಲ್ಲಿ ನಡೆಯಲಿದೆ.

ಅಂದು ಬೆಳಗ್ಗೆ 7 ರಿಂದ 8:30ರವರೆಗೆ ಪ್ರಾಣಾಯಾಮ ಮತ್ತು ಯೋಗ ಶಿಬಿರ ಕಾರ್ಯಕ್ರಮ ಮತ್ತು ಬೆಳಗ್ಗೆ 9 ರಿಂದ 10 ರವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News