ನ್ಯೂಝಿಲ್ಯಾಂಡ್‌ನಲ್ಲಿ ಪರಿಸರ ತುರ್ತು ಪರಿಸ್ಥಿತಿ ಘೋಷಣೆ

Update: 2020-11-26 17:29 GMT

ವೆಲಿಂಗ್ಟನ್ (ನ್ಯೂಝಿಲ್ಯಾಂಡ್), ನ. 26: ನ್ಯೂಝಿಲ್ಯಾಂಡ್ ಪ್ರಧಾನಿ ಜಸಿಂಡಾ ಆ್ಯರ್ಡರ್ನ್ ಸರಕಾರವು ದೇಶದಲ್ಲಿ ಪರಿಸರ ತುರ್ತು ಪರಿಸ್ಥಿತಿಯನ್ನು ಘೋಷಿಸಲು ನಿರ್ಧರಿಸಿದೆ. ಜಾಗತಿಕ ತಾಪಮಾನದ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲು ಹಾಗೂ ಹವಾಮಾನ ಬದಲಾವಣೆ ವಿರುದ್ಧದ ಹೋರಾಟಕ್ಕೆ ಬಲ ನೀಡಲು ಅದು ಈ ಕ್ರಮಕ್ಕೆ ಮುಂದಾಗಿದೆ.

ಪರಿಸರ ತುರ್ತು ಪರಿಸ್ಥಿತಿಯನ್ನು ಘೋಷಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಸರಕಾರವು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲಿದೆ ಎಂದು ಜಸಿಂಡಾ ಸರಕಾರಿ ಸುದ್ದಿವಾಹಿನಿ ಟಿವಿಎನ್‌ಝಡ್‌ಗೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News