ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಐವರು ಮೃತ್ಯು, ಓರ್ವನಿಗೆ ಗಾಯ

Update: 2020-11-27 05:11 GMT

ರಾಜ್‌ಕೋಟ್: ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಉದಯ ಶಿವಾನಂದ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಶುಕ್ರವಾರ ರಾತ್ರಿ 1ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿಗೆ ಐವರು ಮೃತಪಟ್ಟಿದ್ದರೆ, ಓರ್ವನಿಗೆ ಗಾಯವಾಗಿದೆ.

ಬೆಂಕಿಗೆ ಬಲಿಯಾದವರೆಲ್ಲರೂ 60 ರಿಂದ 70 ವರ್ಷದ ಪ್ರಾಯದವರು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದು, ಘಟನೆಯ ಕುರಿತು ತನಿಖೆಗಾಗಿ ರಾಜ್ಯ ಸರಕಾರ ಆದೇಶಿಸಿದೆ.

 ಒಟ್ಟು ಏಳು ಮಂದಿ ಐಸಿಯುಗೆ ದಾಖಲಾಗಿದ್ದರು. ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರರನ್ನು ರಕ್ಷಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರು ಬೇರೆ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಜ್‌ಕೋಟ್ ಮಹಾನಗರ ಪಾಲಿಕೆಯ ಆಯುಕ್ತ ಉದಿತ್ ಅಗರ್‌ವಾಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News