ಮೊದಲ ಏಕದಿನ: ಭಾರತಕ್ಕೆ 375 ರನ್ ಗುರಿ ನೀಡಿದ ಆಸ್ಟ್ರೇಲಿಯ

Update: 2020-11-27 09:05 GMT

 ಸಿಡ್ನಿ: ನಾಯಕ ಹಾಗೂ ಆರಂಭಿಕ ಆಟಗಾರ ಆ್ಯರೊನ್ ಫಿಂಚ್ ಹಾಗೂ ಮಾಜಿ ನಾಯಕ ಸ್ಟೀವನ್ ಸ್ಮಿತ್ ಆಕರ್ಷಕ ಶತಕದ ನೆರವಿನಿಂದ ಆಸ್ಟ್ರೇಲಿಯ ತಂಡ ಶುಕ್ರವಾರ ಇಲ್ಲಿ ನಡೆದ ಮೊದಲ ಏಕದಿನ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಗೆಲುವಿಗೆ 375 ರನ್ ಗುರಿ ನೀಡಿದೆ.

ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 374 ರನ್ ಗಳಿಸಿತು. ಇನಿಂಗ್ಸ್ ಆರಂಭಿಸಿದ ಡೇವಿಡ್ ವಾರ್ನರ್(69) ಹಾಗೂ ಫಿಂಚ್(114, 124 ಎಸೆತ, 9 ಬೌಂಡರಿ.2 ಸಿಕ್ಸರ್)ಮೊದಲ ವಿಕೆಟ್‌ಗೆ 156 ರನ್ ಸೇರಿಸಿ ಭದ್ರ ಬುನಾದಿ ಹಾಕಿಕೊಟ್ಟರು.

ಸ್ಮಿತ್ ಕೇವಲ 66 ಎಸೆತಗಳಲ್ಲಿ 11 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಹಿತ 105 ರನ್ ಗಳಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಭಾರತದ ಬೌಲಿಂಗ್ ವಿಭಾಗದಲ್ಲಿ ಮುಹಮ್ಮದ್ ಶಮಿ(3-59)ಯಶಸ್ವಿ ಬೌಲರ್ ಎನಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News