ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿಗೆ ಬೆಂಕಿ: ಅಪಾರ ಪ್ರಮಾಣದ ವಸ್ತುಗಳಿಗೆ ಹಾನಿ

Update: 2020-11-27 12:10 GMT

ಶಿವಮೊಗ್ಗ, ನ.27: ತೀರ್ಥಹಳ್ಳಿ ಪಟ್ಟಣದ ಆಗುಂಬೆ ಮುಖ್ಯ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಬೇಕರಿ ಸಂಪೂರ್ಣ ಸುಟ್ಟು ಹೋಗಿ, ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ.

ಶುಕ್ರವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿರುವುದರಿಂದ ಈ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News