ಐಎಂಎ ಬಹುಕೋಟಿ ವಂಚನೆ ಪ್ರಕರಣ: ರೋಷನ್ ಬೇಗ್ ಜಾಮೀನು ಅರ್ಜಿ ವಿಚಾರಣೆ ನ.30ಕ್ಕೆ ಮುಂದೂಡಿಕೆ

Update: 2020-11-27 12:37 GMT

ಬೆಂಗಳೂರು, ನ.27: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸಿಬಿಐ ಕೋರ್ಟ್ ನ.30ಕ್ಕೆ ಮುಂದೂಡಿಕೆ ಮಾಡಿದೆ.

ಸಿಬಿಐ ಪರ ವಾದಿಸಿದ ವಕೀಲರು, ರೋಷನ್ ಬೇಗ್ ಅವರು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಅವರನ್ನು ಸಿಬಿಐ ಕಸ್ಟಡಿಗೆ ಪಡೆಯಲು ಸಾಧ್ಯವಾಗಿಲ್ಲ. ಅವರನ್ನು ತಮ್ಮ ವಶಕ್ಕೆ ನೀಡಬೇಕು. ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ನ್ಯಾಯಪೀಠವು ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.  

ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ 36ನೆ ಆರೋಪಿಯಾಗಿದ್ದಾರೆ. ನ.23ರಂದು ಸಿಬಿಐ ಅಧಿಕಾರಿಗಳ ತಂಡ ರೋಷನ್ ಬೇಗ್ ಅವರ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News