ರಾಜ್ಯ ವನ್ಯಜೀವಿ ಮಂಡಳಿಗೆ ಸದಸ್ಯರ ನೇಮಕ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

Update: 2020-11-27 13:47 GMT

ಬೆಂಗಳೂರು, ನ.27: ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಗೆ ಸದಸ್ಯರನ್ನು ನೇಮಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಪ್ರಮೋದ್ ವೆಂಕಟೇಶಮೂರ್ತಿ ಸಲ್ಲಿಸಿರುವ ಪಿಐಎಲ್ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬರಲಿದೆ.

ಅರಣ್ಯದಲ್ಲಿ ಮತ್ತು ಕಾಡಂಚಿನಲ್ಲಿ ವಾಸಿಸುವ ಪರಿಶಿಷ್ಟ ಪಂಗಡದ ಸದಸ್ಯರು ಮತ್ತು ಪರಿಸರವಾದಿಗಳು, ಪರಿಸರ ವಿಜ್ಞಾನಿಗಳನ್ನು ಹೊಸ ಸದಸ್ಯ ಮಂಡಳಿ ಒಳಗೊಂಡಿಲ್ಲ ಎಂದು ಆರೋಪಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News