ಉಡುಪಿ : 29 ಮಂದಿಗೆ ಕೊರೋನ ಪಾಸಿಟಿವ್

Update: 2020-11-27 15:54 GMT

ಉಡುಪಿ, ನ.27: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು29 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. 24 ಮಂದಿ ಚಿಕಿತ್ಸೆಯಿಂದ ಗುಣಮುಖರಾದರೆ, ಈಗ 196 ಮಂದಿ ಕೊರೋನ ಪಾಸಿಟಿವ್‌ಗೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 14 ಮಂದಿ ಪುರುಷರು ಹಾಗೂ 15 ಮಂದಿ ಮಹಿಳೆಯರು. ಇವರಲ್ಲಿ ಎಂಟು ಮಂದಿ ಪುರುಷರು ಹಾಗೂ ಏಳು ಮಂದಿ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 10, ಕುಂದಾಪುರ ತಾಲೂಕಿನ 16, ಕಾರ್ಕಳ ತಾಲೂಕಿನ ಇಬ್ಬರಲ್ಲಿ ಹಾಗೂ ಹೊರಜಿಲ್ಲೆಯ ಒಬ್ಬರಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ತಿಳಿಸಿದರು.

24 ಮಂದಿ ಗುಣಮುಖ: ಗುರುವಾರ ಜಿಲ್ಲೆಯಲ್ಲಿ 24 ಮಂದಿ ಚಿಕಿತ್ಸೆ ಬಳಿಕ ಸೋಂಕಿನಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 22,225 ಆಗಿದೆ. ಜಿಲ್ಲೆಯಲ್ಲಿ ಸದ್ಯ 196 ಮಂದಿ ಈಗಲೂ ಕೋವಿಡ್‌ಗೆ ಚಿಕಿತ್ಸೆಯಲ್ಲಿದ್ದಾರೆ ಎಂದರು.

2505 ನೆಗೆಟಿವ್: ಜಿಲ್ಲೆಯಲ್ಲಿ ಗುರುವಾರ ಒಟ್ಟು 2534 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 2505 ಮಂದಿ ನೆಗೆಟಿವ್ ಬಂದಿದ್ದಾರೆ. 29 (ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,608 ಕ್ಕೇರಿದೆ.

ಜಿಲ್ಲೆಯಲ್ಲಿ ಗುರುವಾರದವರೆಗೆ ಒಟ್ಟು 2,39,172 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,16,564 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಒಟ್ಟು 22,608 ಮಂದಿ ಪಾಸಿಟಿವ್ ಬಂದಿದ್ದರೆ, ಈ ಪೈಕಿ 22,225 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಒಟ್ಟು ಸಂಖ್ಯೆ 187 ಮಾತ್ರ.

ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ. ಇದರಿಂದ ಸತತ 20 ದಿನಗಳಿಂದ ಕೋವಿಡ್‌ಗೆ ಜಿಲ್ಲೆಯಲ್ಲಿ ಯಾರೂ ಬಲಿಯಾಗಿಲ್ಲ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ತಿಳಿಸಿದೆ.


6 ವಿದ್ಯಾರ್ಥಿಗಳು ಪಾಸಿಟಿವ್‌

ಶುಕ್ರವಾರ ಜಿಲ್ಲೆಯ ಇನ್ನೂ ಆರು ಮಂದಿ ಕಾಲೇಜು ವಿದ್ಯಾರ್ಥಿಗಳು ಕೋವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಪಾಸಿಟಿವ್ ಬಂದ ವಿದ್ಯಾರ್ಥಿಗಳು ಸಂಖ್ಯೆ 38ಕ್ಕೇರಿದೆ. ಒಬ್ಬ ಪ್ರಾಧ್ಯಾಪಕರೂ ಪಾಸಿಟಿವ್ ಬಂದಿದ್ದಾರೆ ಎಂದು ಡಿಎಚ್‌ಓ ಡಾ. ಸುಧೀರ್ ‌ಚಂದ್ರ ಸೂಡ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News