ಲಾಕ್‍ಡೌನ್ ಸಂದರ್ಭದ ಅಪರೂಪದ ಛಾಯಾಚಿತ್ರಗಳನ್ನು ವೀಕ್ಷಿಸಿದ ಬಿಎಸ್‌ವೈ

Update: 2020-11-27 13:56 GMT

ಬೆಂಗಳೂರು, ನ.27: ಲಾಕ್‍ಡೌನ್ ಸಮಯದಲ್ಲಿ ಸೆರೆಹಿಡಿಯಲಾಗಿದ್ದ ಅಪರೂಪದ ಛಾಯಾಚಿತ್ರಗಳನ್ನು ಚಿತ್ರಕಲಾ ಪರಿಷತ್‍ನಲ್ಲಿ ಪ್ರದರ್ಶನಕ್ಕೆ ಇಡಲಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಚಾಲನೆ ನೀಡಿದ್ದಾರೆ.

ಲಾಕ್‍ಡೌನ್‍ನಿಂದಾಗಿ ಕೂಲಿಕಾರ್ಮಿಕರು ನಡಿಗೆಯ ಮೂಲಕ ತಮ್ಮ ಊರುಗಳಿಗೆ ಹೋಗುತ್ತಿರುವುದು, ನಿರಾಶ್ರಿತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಂತ್ವನ ಹೇಳುತ್ತಿರುವುದು, ಸ್ವಯಂ ಸೇವಾ ಸಂಸ್ಥೆಗಳಿಂದ ನಿರಾಶ್ರಿತರಿಗೆ ಅಗತ್ಯ ವಸ್ತುಗಳ ವಿತರಣೆ, ಲಾಕ್‍ಡೌನ್ ಸಂದರ್ಭದಲ್ಲಿ ಬೆಂಗಳೂರಿನ ವಿವಿಧ ಪ್ರದೇಶಗಳ ಸನ್ನಿವೇಶಗಳನ್ನು ಛಾಯಾಗ್ರಾಹಕರು ಸೆರೆ ಹಿಡಿದಿದ್ದಾರೆ.

ಕರ್ನಾಟಕ ಪತ್ರಿಕಾ ಛಾಯಾಗ್ರಾಹಕರ ಸಂಘ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಮ್ಮ ಪತ್ರಿಕಾ ಛಾಯಾಗ್ರಾಹಕರು ಲಾಕ್‍ಡೌನ್‍ನ ವಿವಿಧ ಸಂದರ್ಭಗಳನ್ನು ಕಣ್ಣಿಗೆ ಕಟ್ಟುವಂತೆ ಸೆರೆ ಹಿಡಿದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಛಾಯಾಚಿತ್ರ ಪ್ರದರ್ಶನವು ಇಂದಿನಿಂದ ಮೂರು ದಿನಗಳವರೆಗೆ ನಡೆಯಲಿದೆ. ಈ ವೇಳೆ ಲಿಂಗಾಯತ ಪಂಚಮಶಾಲಿ ಪೀಠದ ಮೃತ್ಯುಂಜಯ ಸ್ವಾಮೀಜಿ, ಹಿರಿಯ ಪತ್ರಕರ್ತ ರವಿಹೆಗಡೆ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News