ಕಾರಾಜೆಯಲ್ಲಿ ನ.29 ರಂದು ಎಸ್ಸೆಸ್ಸೆಫ್ ಬ್ಲಡ್ ಸೈಬೋ 204ನೇ ರಕ್ತದಾನ ಶಿಬಿರ

Update: 2020-11-27 14:43 GMT

ಬಂಟ್ವಾಳ, ನ.27: ಎಸ್ಸೆಸ್ಸೆಫ್ ಪಾಣೆಮಂಗಳೂರು ಸೆಕ್ಟರ್ ವತಿಯಿಂದ, ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಇದರ ಸಹಭಾಗಿತ್ವದಲ್ಲಿ ಎಸ್ಸೆಸ್ಸೆಫ್ ಬ್ಲಡ್ ಸೈಬೋ ಇದರ 204ನೇ ರಕ್ತದಾನ ಶಿಬಿರ ನ.29 ರಂದು ಆದಿತ್ಯವಾರ ಕಾರಾಜೆಯ ನೂರುಲ್ ಹುದಾ ಮದ್ರಸ ಹಾಲ್ ನಲ್ಲಿ ನಡೆಯಲಿದೆ.

ರಕ್ತದಾನ ಶಿಬಿರವು ಬೆಳಗ್ಗೆ 9 ಗಂಟೆಗೆ ಆರಂಭವಾಗಲಿದ್ದು, 1 ಗಂಟೆಗೆ ಕೊನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸೆಯ್ಯದ್ ಮುಶ್ತಾಕುರ್ರಹ್ಮಾನ್ ತಂಙಳ್ ಚಟ್ಟೆಕ್ಕಲ್, ಅಬ್ದುರ್ರಹ್ಮಾನ್ ಮದನಿ ಜೆಪ್ಪು, ಕಾರಾಜೆ ಖತೀಬ್ ಸಈದ್ ಮುಸ್ಲಿಯಾರ್, ಎಸ್ಸೆಸ್ಸೆಫ್ ಪಾಣೆಮಂಗಳೂರು ಸೆಕ್ಟರ್ ಅಧ್ಯಕ್ಷ ಉಸ್ಮಾನ್ ಸಖಾಫಿ ಸೇರಿ ಹಲವು ಗಣ್ಯರು, ಸಂಘಟನಾ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಎಸ್ಸೆಸ್ಸೆಫ್ ಪಾಣೆಮಂಗಳೂರು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಆಲಡ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News