ನ.28ರಂದು ಕೃಷಿ ವಿವಿಯ 54ನೇ ಘಟಿಕೋತ್ಸವ: 986 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Update: 2020-11-27 14:45 GMT

ಬೆಂಗಳೂರು, ನ.27: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 54ನೆ ಘಟಿಕೋತ್ಸವ ಸಮಾರಂಭವನ್ನು ನ.28ರಂದು ಶನಿವಾರ ಬೆಳಗ್ಗೆ 11ಕ್ಕೆ ಜಿ.ಕೆ.ವಿ.ಕೆ. ಆವರಣದ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರ್‍ರಾಷ್ಟ್ರೀಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಿಶ್ವವಿದ್ಯಾಲಯವು, 2018-19ರಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 54ನೇ ಘಟಿಕೋತ್ಸವದಲ್ಲಿ ಒಟ್ಟಾರೆ 986 ವಿದ್ಯಾರ್ಥಿಗಳಿಗೆ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಮಾಡಲಾಗುತ್ತಿದೆ. ಅದರಲ್ಲಿ 638 ವಿದ್ಯಾರ್ಥಿಗಳು ವಿವಿಧ ಸ್ನಾತಕ ಪದವಿಗಳನ್ನು, 280 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಹಾಗೂ 68 ವಿದ್ಯಾರ್ಥಿಗಳು ಡಾಕ್ಟೊರಲ್ ಪದವಿಗಳನ್ನು ಪಡೆಯಲಿದ್ದಾರೆ.

ಇದೇ ಸಮಾರಂಭದಂದು ಡಾಕ್ಟರ್ ಆಫ್ ಫಿಲಾಸಫಿ ಪದವಿಯಲ್ಲಿ ಒಟ್ಟು 20 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲ್ಲಿ 8 ವಿದ್ಯಾರ್ಥಿನಿಯರು ಹಾಗೂ 4 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯದ 11 ಚಿನ್ನದ ಪದಕಗಳನ್ನು, 9 ದಾನಿಗಳ ಚಿನ್ನದ ಪದಕಗಳು ಹಾಗೂ 3 ದಾನಿಗಳ ಚಿನ್ನದ ಪದಕ ಪ್ರಶಸ್ತಿ, ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

ಮಾಸ್ಟರ್ ಪದವಿಯಲ್ಲಿ ಒಟ್ಟು 54 ಚಿನ್ನದ ಪದಕಗಳನ್ನು ಪ್ರಧಾನ ಮಾಡಲಿದ್ದು, ಅದರಲ್ಲಿ 25 ವಿದ್ಯಾರ್ಥಿನಿಯರು ಹಾಗೂ 6 ವಿದ್ಯಾರ್ಥಿಗಳು  ಕೃಷಿ ವಿಶ್ವವಿದ್ಯಾನಿಲಯ ನೀಡುವ 20 ಚಿನ್ನದ ಪದಕಗಳು ಹಾಗೂ 5 ಆವರಣದ ಚಿನ್ನದ ಪದಕಗಳನ್ನು, 29 ದಾನಿಗಳ ಚಿನ್ನದ ಪದಕಗಳು ಹಾಗೂ 12 ದಾನಿಗಳ ಚಿನ್ನದ ಪದಕ ಪ್ರಶಸ್ತಿ, ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

ಸ್ನಾತಕ ಪದವಿಯಲ್ಲಿ ಒಟ್ಟು 47 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದ್ದು, ಅದರಲ್ಲಿ 8 ವಿದ್ಯಾರ್ಥಿನಿಯರು ಹಾಗೂ 8 ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾನಿಲಯ ನೀಡುವ 6 ಚಿನ್ನದ ಪದಕಗಳು, 3 ಆವರಣದ ಚಿನ್ನದ ಪದಕಗಳು, 37 ದಾನಿಗಳ ಚಿನ್ನದ ಪದಕಗಳು, 1 ಕೃವಿವಿಯ ಕ್ರೀಡಾ ಚಿನ್ನದ ಪದಕ ಹಾಗೂ 7 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಂಚಿಕೊಂಡಿರುತ್ತಾರೆ.

54ನೇ ಘಟಿಕೋತ್ಸವ ಸಮಾರಂಭದಲ್ಲಿ ಒಟ್ಟಾರೆ 41 ವಿದ್ಯಾರ್ಥಿನಿಯರು 72 ಚಿನ್ನದ ಪದಕಗಳನ್ನು, 12 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಹಾಗೂ 18 ವಿದ್ಯಾರ್ಥಿಗಳು 49 ಚಿನ್ನದ ಪದಕಗಳನ್ನು ಮತ್ತು 10 ದಾನಿಗಳ ಚಿನ್ನದ ಪದಕ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಪಡೆಯಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News