ದಿಲ್ಲಿ ಹಿಂಸಾಚಾರ: ಇಶ್ರತ್ ಜಹಾನ್‌ಗೆ ಜಾಮೀನು ನಿರಾಕರಣೆ

Update: 2020-11-27 14:54 GMT

ಹೊಸದಿಲ್ಲಿ, ನ. 27: ಈಶಾನ್ಯ ದಿಲ್ಲಿ ಹಿಂಸಾಚಾರ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್‌ಗೆ ಮಧ್ಯಂತರ ಜಾಮೀನು ನೀಡಲು ದಿಲ್ಲಿ ನ್ಯಾಯಾಲಯ ಶುಕ್ರವಾರ ನಿರಾಕರಿಸಿದೆ.

 ಮಂಡೋಲಿ ಕಾರಾಗೃಹದಲ್ಲಿ ಕೊರೋನ ಸಾಂಕ್ರಾಮಿಕ ರೋಗ ಹರಡುತ್ತಿದೆ ಎಂದು ಹಾಗೂ ಇತರ ವೈದ್ಯಕೀಯ ಸಮಸ್ಯೆಗಳನ್ನು ಉಲ್ಲೇಖಿಸಿ ಮಧ್ಯಂತರ ಜಾಮೀನು ನೀಡುವಂತೆ ಕೋರಿ ಇಶ್ರತ್ ಜಹಾನ್ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ವೈದ್ಯಕೀಯ ವಿಷಯದಲ್ಲಿ ಅರ್ಜಿದಾರರ ಅಸಮಾಧಾನ ಹಾಗೂ ಕಾರಾಗೃಹದ ಅಧಿಕಾರಿಯ ವರದಿಯನ್ನು ಪರಿಶೀಲಿಸಲಾಗಿದೆ. ಆದರೆ, ಅರ್ಜಿದಾರರಿಗೆ ಮಧ್ಯಂತರ ಜಾಮೀನು ನೀಡಲು ಯಾವುದೇ ಸಮರ್ಪಕ ಕಾರಣ ತಿಳಿದು ಬಂದಿಲ್ಲ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಬ್ ರಾವತ್ ಹೇಳಿದ್ದಾರೆ.

ಜಹಾನ್ ಪರ ಹಿರಿಯ ವಕೀಲ ರಮೇಶ್ ಗುಪ್ತಾ, ಜಹಾನ್ ವಕೀಲ ವೃತ್ತಿ ನಡೆಸುತ್ತಿದ್ದಾರೆ. ಅವರಿಗೆ ಯಾವುದೇ ಕ್ರಿಮಿನಲ್ ಹಿನ್ನಲೆ ಇಲ್ಲ ಎಂದು ಪ್ರತಿಪಾದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News