ವಂಡ್ಸೆ ಸರಕಾರಿ ಪ.ಪೂ. ಕಾಲೇಜಿನ ಪ್ರಾಚಾರ್ಯರಾಗಿ ರಾಜೀವ್ ನೇಮಕ

Update: 2020-11-27 16:12 GMT

ಕುಂದಾಪುರ, ನ.27: ಶಿರೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಭಾರ ಪ್ರಾಚಾರ್ಯ ರಾಗಿ ಸೇವೆ ಸಲ್ಲಿಸಿ ಇದೀಗ ಪದೋನ್ನತಿ ಹೊಂದಿ ರುವ ರಾಜೀವ್ ನಾಯ್ಕಾ, ವಂಡ್ಸೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಕುಂದಾಪುರದ ಭಂಡಾರ್ ‌ಕಾರ್ಸ್ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕ ವೃತ್ತಿಆರಂಭಿಸಿದ ಇವರು ಸರಕಾರಿ ಸೇವೆಗೆ ಸೇರಿ ಬಿದ್ಕಲ್‌ಕಟ್ಟೆ ಮತ್ತು ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಆಂಗ್ಲಭಾಷೆಯ ಉಪನ್ಯಾಸಕ ರಾಗಿ ಸೇವೆ ಸಲ್ಲಿಸಿದ್ದರು. ಉಡುಪಿ ಜಿಲ್ಲಾ ಪ.ಪೂ. ಇಂಗ್ಲಿಷ್ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿರುವ ಇವರು, ಹೈದ್ರಾಬಾದ್‌ನ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲ್ಯಾಂಗ್ವೇಜಸ್‌ನಿಂದ ಪಿಜಿಡಿಟಿಇ, ಎಂ.ಫಿಲ್ ಪದವಿ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News