ಕುರುಬ ಸಮುದಾಯ ಎಸ್ಟಿಗೆ ಸೇರ್ಪಡೆ, ಅಭಿವೃದ್ಧಿ ನಿಗಮ ಸ್ಥಾಪಿಸಲು ಸಿಎಂಗೆ ಮನವಿ

Update: 2020-11-27 16:40 GMT

ಬೆಂಗಳೂರು, ನ. 27: ರಾಜ್ಯದಲ್ಲಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್ಟಿ)ಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು. ಜೊತೆಗೆ ಕುರುಬ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಿ, 500 ಕೋಟಿ ರೂ.ಅನುದಾನ ನೀಡಬೇಕೆಂದು ಕೋರಿ ಕುರುಬ ಸಮುದಾಯದ ಸ್ವಾಮೀಜಿಗಳ ನೇತೃತ್ವದ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಚ್. ವಿಶ್ವನಾಥ್, ಎಂಟಿಬಿ ನಾಗರಾಜ್, ಆರ್.ಶಂಕರ್ ಒಳಗೊಂಡ ಕುರುಬ ಸಮುದಾಯ ಮುಖಂಡರ ನಿಯೋಗ ಸಿಎಂ ಬಿಎಸ್‍ವೈ ಅವರಿಗೆ ಮನವಿ ಸಲ್ಲಿಸಿತು.

ಆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಕುರುಬ ಸಮುದಾಯವನ್ನು ಒಬಿಸಿಯಿಂದ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಸೇರಿದಂತೆ ಮೂರು ಬೇಡಿಕೆಗಳನ್ನು ಸಿಎಂ ಮುಂದಿಟ್ಟಿದ್ದು, ಕುರುಬ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಕೋರಿದ್ದೇವೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News