ಮಂಗಳೂರು: ದೈಹಿಕ ಶಿಕ್ಷಕರಿಗೆ ಕಾರ್ಯಾಗಾರ

Update: 2020-11-27 16:49 GMT

ಮಂಗಳೂರು, ನ.27: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ದಕ್ಷಿಣ ವಲಯದ ವತಿಯಿಂದ ದೈಹಿಕ ಶಿಕ್ಷಕರಿಗೆ ಕಾರ್ಯಾಗಾರ ಮತ್ತು ದ.ಕ. ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮವು ನಗರದ ಸಂತ ಆಗ್ನೆಸ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು.

ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣಾಧಿಕಾರಿ ರಾಜಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ದ.ಕ. ಜಿಲ್ಲಾ ಅತ್ಯುತ್ತಮ ವಿಶೇಷ ಶಿಕ್ಷಕ ಪ್ರಶಸ್ತಿ ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರ್ ಕಡ್ತಲ ಮತ್ತು ದ.ಕ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತೆ ಜಯಶ್ರೀ ಪ್ರತೀಮ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಕೊರೋನ ವಾರಿಯರ್ಸ್ ಆಗಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಅಭಿನಂದಿಸಲಾಯಿತು.

ದ.ಕ. ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಜಿಲ್ಲಾ ಯುವಜನ ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿಸೋಜ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್, ಸೈಂಟ್ ಆಗ್ನೆಸ್ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ರೀಟಾ ಮೆಟಿಲ್ಡಾ ಪಿಂಟೊ, ದ.ಕ. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಲಿಲ್ಲಿ ಪಾಯಸ್, ದ.ಕ. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜೊತೆ ಕಾರ್ಯದರ್ಶಿ ಡೊನಾಲ್ಡ್ ಲೋಬೊ ಪಾಲ್ಗೊಂಡಿದ್ದರು.

ದ.ಕ. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ತ್ಯಾಗಂ ಹರೆಕಳ ಸ್ವಾಗತಿಸಿದರು. ಲ್ಯಾನ್ಸಿ ಸಿಕ್ವೇರ ವಂದಿಸಿದರು. ವಿನ್ಸೆಂಟ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News