ರಾಷ್ಟ್ರ ವಿರೋಧಿ ಕೃತ್ಯ ಸಹಿಸಲಾಗದು: ಶಾಸಕ ಕಾಮತ್

Update: 2020-11-27 17:02 GMT

ಮಂಗಳೂರು, ನ.27: ನಗರದ ಬಿಜೈ ಪರಿಸರದಲ್ಲಿ ಕಟ್ಟಡದ ಕಾಂಪೌಂಡ್‌ನಲ್ಲಿ ‘ಲಷ್ಕರ್’ ಪರ ಬರಹಗಳು ಕಂಡು ಬಂದಿದ್ದು, ರಾಷ್ಟ್ರ ವಿರೋಧಿ ಕೃತ್ಯಗಳನ್ನು ಸಹಿಸಲಾಗದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಗೋಡೆಬರಹಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗ ಜೊತೆ ಚರ್ಚೆ ನಡೆಸಲಾಗಿದೆ. ಮಂಗಳೂರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಪರವಾಗಿ ಕಂಡು ಬಂದಿರುವ ಗೋಡೆಬರಹವು ಆತಂಕಕಾರಿಯಾಗಿದೆ. ಇದನ್ನು ಸಹಿಸಲಾಗದು ಎಂದು ಶಾಸಕರು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಕ್ರಮ ಜರಗಿಸಲು ಸೂಚನೆ ನೀಡಿದ್ದೇನೆ. ಇಂತಹ ಮನಸ್ಥಿತಿಯನ್ನು ಮೊಳಕೆಯಲ್ಲೇ ಚಿವುಟದಿದ್ದರೆ ಭಯೋತ್ಪಾದನಾ ಚಟುವಟಿಕೆಯ ಬೇರು ಮತ್ತಷ್ಟು ಆಳಕ್ಕೆ ಹೋಗಬಹುದು ಎಂದು ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News