ಎಂ.ಕಾಂ. ಫಲಿತಾಂಶ : ಅಂಜುಮನ್ ಸ್ನಾತಕೋತ್ತರ ಕೆಂದ್ರಕ್ಕೆ ಶೇ.100ಫಲಿತಾಂಶ

Update: 2020-11-27 17:12 GMT

ಭಟ್ಕಳ : ಕರ್ನಾಟಕ ವಿಶ್ವವಿದ್ಯಾಲಯವು ನಡೆಸಿದ ಎಂ.ಕಾಂ. ಅಂತಿಮ ವರ್ಷದ ಫಲಿತಾಂಶ ಪ್ರಕಟವಾಗಿದ್ದು, ಸ್ಥಳೀಯ ಅಂಜುಮನ್ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಓದುತ್ತಿರುವ ಎಂ.ಕಾಂ.ಅಂತಿಮ ವರ್ಷದ ವಿದ್ಯಾರ್ಥಿಗಳು ಶೇಕಡಾ ನೂರರಷ್ಟು ಫಲಿತಾಂಶ ದಾಖಲಿಸಿದ್ದಾರೆ.

ಪರೀಕ್ಷೆಯನ್ನು ತೆಗೆದುಕೊಂಡ 37 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಉನ್ನತ ಶ್ರೇಣಿಯೊಂದಿಗೆ (ಡಿಸ್ಟಿಂಕ್ಷನ್) ತೇರ್ಗಡೆಯಾದರೆ, ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕುಮಾರಿ ರಮ್ಯಾ ಸುಬ್ರಾಯ ನಾಯ್ಕ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದರೆ, ನಂತರದ ನಾಲ್ಕು ಸ್ಥಾನಗಳನ್ನು ಕ್ರಮವಾಗಿ ಸ್ವಾತಿ ಕೇಶವ ಖಾರ್ವಿ, ಐಶಾ ನಿದಾ, ಲಿಖಿತಾಆನಂದ ನಾಯ್ಕ ಮತ್ತು ಮಾಧುರಿಗಣಪತಿ ನಾಯಕ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಯನ್ನುಅಂಜುಮನ್ ಆಡಳಿತ ಮಂಡಳಿಯು ಶ್ಲಾಘಿಸಿದರೆ, ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಮುಸ್ತಾಕ್ ಕೆ. ಶೇಖ್ ಹಾಗೂ ಕಾಲೇಜಿನ ಪ್ರಾಧ್ಯಾಪಕವೃಂದ ಮತ್ತು ಸಿಬ್ಬಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಭವಿಷ್ಯ ಉಜ್ವಲವಾಗಲೆಂದು ಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News