ನಿದ್ದೆ ಮಾತ್ರೆ ಸೇವಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನ

Update: 2020-11-28 02:18 GMT

ಬೆಂಗಳೂರು, ನ. 28: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಅಪರೇಷನ್ ಕಮಲಕ್ಕೆ ಶ್ರಮಿಸಿದ್ದ ಸಿಎಂ ಆಪ್ತ ಬಳಗದ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನಿಸಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕುಟುಂಬದ ಸದಸ್ಯರು ಅವರನ್ನು ಇಲ್ಲಿನ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆಂದು ತಿಳಿದುಬಂದಿದೆ.

ಅತ್ಯಂತ ಗಂಭೀರ ಸ್ಥಿತಿಯಲ್ಲಿರುವ ಸಂತೋಷ್ ಸಾವು- ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಆದರೆ, ವೈದ್ಯಕೀಯ ಮೂಲಗಳು ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿವೆ.

ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೆ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಹೆಚ್ಚು ಮಹತ್ವ ಪಡೆದುಕೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News