ನಳಿನ್ ಕುಮಾರ್‌ಗೆ ಏನೋ ಹೆಚ್ಚು ಕಮ್ಮಿ ಆಗಿದೆ, ಅವರನ್ನು ಆಸ್ಪತ್ರೆಗೆ ಸೇರಿಸಬೇಕು: ಡಿಕೆಶಿ

Update: 2020-11-28 07:09 GMT

ಕಾರವಾರ, ನ.28: ಸಿದ್ದರಾಮಯ್ಯ ಮಾದಕ ದ್ರವ್ಯದಿಂದ ಸರಕಾರ ನಡೆಸಿದ್ದರೆ, ಇನ್ನೂ ಯಾಕೆ ಎಫ್‌ಐಆರ್ ದಾಖಲಿಸಿಲ್ಲ ? ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಏನೋ ಸ್ವಲ್ಪ ಹೆಚ್ಚು ಕಮ್ಮಿ ಆಗಿದೆ, ಅವರನ್ನು ಆಸ್ಪತ್ರೆಗೆ ಸೇರಿಸಬೇಕು. ಅವರಿಗೆ ಇದು ಅರ್ಥವಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸರಕಾರ ಮಾದಕ ದ್ರವ್ಯದ ಹಣದಿಂದ ಸರಕಾರ ನಡೆಸಿದ್ದರೂ ಎಂಬ ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಅವರು ಡಿಕೆಶಿ ಈ ರೀತಿ ತಿರುಗೇಟು ನೀಡಿದರು.

ಶಿರಸಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಭಾಗವಹಿಸಲು ಶನಿವಾರ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು.

ಸಿದ್ದರಾಮಯ್ಯ ಮಾದಕ ದ್ರವ್ಯದಿಂದ ಸರಕಾರ ನಡೆಸಿದ್ದರೆ, ಇನ್ನೂ ಯಾಕೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿದ ಡಿಕೆಶಿ, ನಾನು ಕೂಡಾ ಸರಕಾರದ ಭಾಗವಾಗಿದ್ದೆ, ನನ್ನ ಮೇಲೂ ಎಫ್‌ಐಆರ್ ಹಾಕಲಿ. ನಮ್ಮ ಸರಕಾರದಲ್ಲಿದ್ದವರು ಇದೀಗ ಅವರ ಸರಕಾರದಲ್ಲಿ ಇದ್ದಾರಲ್ಲ, ಅವರ ಮೇಲೂ ಎಫ್‌ಐಆರ್ ದಾಖಲಿಸಲಿ ಎಂದು ಹೇಳಿದರು.

ಕಟೀಲು ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನ ಇದೆ ಎಂದು ತಿಳ್ಕೊಂಡಿದ್ದೆ.ಈ ರೀತಿಯ ಮಾತುಗಳಿಂದ ಅವರ ಸ್ಥಾನಕ್ಕೇ ಕಳಂಕ ಬಂದ ಹಾಗೆ ಆಗುತ್ತದೆ ಎಂದರು.

ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಪ್ರಕರಣದ ತನಿಖೆ ಆಗಲಿ
ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಪ್ರಕರಣದ ಹಿಂದೆ ಗೌಪ್ಯವಾದ ವಿಚಾರಗಳು ಅಡಗಿವೆ. ಆದ್ದರಿಂದ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಅದು ಸರಕಾರದ ಮಟ್ಟದಲ್ಲಿ ನಡೆದರೆ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರಾಜ್ಯ ಸರಕಾರದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಬಿಜೆಪಿಯವರ ಆಂತರಿಕ ವಿಚಾರಗಳಲ್ಲಿ ನಾವು ತಲೆ ಹಾಕುವುದಿಲ್ಲ. ನಮ್ಮ ಪಕ್ಷದಿಂದ ಅಲ್ಲಿಗೆ ಹೋದ ಕೆಲವರು ಬಿಜೆಪಿಗೇನು ಮಾಡಬೇಕೋ ಅದನ್ನು ಮಾಡ್ತಾರೆ. ನಾವು ಅನುಭವಿಸಿದ್ದನ್ನು ಅವರೂ ಅನುಭವಿಸ್ತಾರೆ ಎಂದು ಹೇಳಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News