ಬೆಂಗಳೂರು ವಿಮಾನ ನಿಲ್ದಾಣದಲ್ಲಿ 86.76 ಲಕ್ಷ ರೂ. ಮೌಲ್ಯದ ಚಿನ್ನ ಜಪ್ತಿ

Update: 2020-11-28 11:44 GMT

ಬೆಂಗಳೂರು, ನ.28: ದೇವನಹಳ್ಳಿಯ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 86.76 ಲಕ್ಷ ರೂ. ಮೌಲ್ಯದ ಚಿನ್ನದ ಪೇಸ್ಟ್ ಅನ್ನು ಕಸ್ಟಮ್ಸ್ ವಿಭಾಗದ ಏರ್ ಇಂಟಲಿಜೆನ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಕಳ್ಳ ಸಾಗಾಣೆದಾರರು ಹೊಸ ತಂತ್ರಜ್ಞಾನ ಬಳಸಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಮರೆಮಾಚಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ತಡರಾತ್ರಿ ಕಾರ್ಯಾಚರಣೆ ನಡೆಸಿದ ಓರ್ವ ವ್ಯಕ್ತಿಯನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News