ವಿಶ್ವವಿದ್ಯಾಲಯಗಳಲ್ಲಿ ಅತಿಥಿ ಉಪನ್ಯಾಸಕರ ಸೇವೆ 2020-21ನೇ ಸಾಲಿಗೂ ಮುಂದುವರಿಕೆ

Update: 2020-11-28 13:38 GMT

ಬೆಂಗಳೂರು, ನ.28: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕೋವಿಡ್-19ರ ಹಿನ್ನೆಲೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿಗೂ ಮುಂದುವರಿಸುವಂತೆ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಶೀತಲ್ ಎಂ.ಹಿರೇಮಠ್ ನಿರ್ದೇಶಿಸಿದ್ದಾರೆ.

ಈ ಕುರಿತು ರಾಜ್ಯದ ಎಲ್ಲ ವಿಶ್ವವಿದ್ಯಾಲಯದ ಕುಲಸಚಿವರಿಗೆ ಪತ್ರ ಬರೆದಿರುವ ಅವರು,  2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಒಂದು ದಿನದ ಮಟ್ಟಿಗೆ ಬಿಡಗುಡೆಗೊಳಿಸಿ, 2020-21ನೇ ಶೈಕ್ಷಣಿಕ ಸಾಲಿಗೂ ಇವರ ಸೇವೆಯನ್ನು ಸಾರ್ವಜನಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ನಿಯಮಾನುಸಾರ ಮುಂದುವರಿಸಬೇಕೆಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News