ಉಡುಪಿ : ಮತ್ತೆ 29 ಮಂದಿಗೆ ಕೊರೋನ ಪಾಸಿಟಿವ್

Update: 2020-11-28 14:26 GMT

ಉಡುಪಿ, ನ. 28: ಜಿಲ್ಲೆಯಲ್ಲಿ ಶನಿವಾರ 29 ಮಂದಿ ಕೊರೋನ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. 21 ಮಂದಿ ಚಿಕಿತ್ಸೆಯಿಂದ ಗುಣಮುಖ ರಾದರೆ, ಸದ್ಯ ಒಟ್ಟು 204 ಮಂದಿ ಕೊರೋನ ಪಾಸಿಟಿವ್‌ಗೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ 15 ಮಂದಿ ಪುರುಷರು ಹಾಗೂ 14 ಮಂದಿ ಮಹಿಳೆಯರು. ಇವರಲ್ಲಿ ತಲಾ 11 ಮಂದಿ ಪುರುಷರು ಹಾಗೂ ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳಿಲ್ಲ. ಉಡುಪಿ ತಾಲೂಕಿನ 16, ಕುಂದಾಪುರ ತಾಲೂಕಿನ 7, ಕಾರ್ಕಳ ತಾಲೂಕಿನ ಆರು ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ ಎಂದು ಡಾ.ಸೂಡ ತಿಳಿಸಿದರು.

21 ಮಂದಿ ಗುಣಮುಖ: ಶುಕ್ರವಾರ ಜಿಲ್ಲೆಯಲ್ಲಿ 21 ಮಂದಿ ಚಿಕಿತ್ಸೆ ಬಳಿಕ ಸೋಂಕಿನಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಸದ್ಯ 22,246 ಆಗಿದೆ. ಜಿಲ್ಲೆಯಲ್ಲಿ ಸದ್ಯ 204 ಮಂದಿ ಕೋವಿಡ್‌ಗೆ ಚಿಕಿತ್ಸೆಯಲ್ಲಿದ್ದಾರೆ ಎಂದರು.

1986 ನೆಗೆಟಿವ್: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 2015 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1986 ಮಂದಿ ನೆಗೆಟಿವ್ ಬಂದಿದ್ದಾರೆ. 29 (ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,637ಕ್ಕೇರಿದೆ. 1986 ನೆಗೆಟಿವ್: ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 2015 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1986 ಮಂದಿ ನೆಗೆಟಿವ್ ಬಂದಿದ್ದಾರೆ. 29 (ಐಸಿಎಂಆರ್ ವರದಿ)ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 22,637ಕ್ಕೇರಿದೆ. ಜಿಲ್ಲೆಯಲ್ಲಿ ಶುಕ್ರವಾರದವರೆಗೆ ಒಟ್ಟು 2,41,187 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,18,550 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಒಟ್ಟು 22,637 ಮಂದಿ ಪಾಸಿಟಿವ್ ಬಂದಿದ್ದರೆ, ಈ ಪೈಕಿ 22,246 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಒಟ್ಟು ಸಂಖ್ಯೆ 187 ಮಾತ್ರ.

ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ. ಇದರಿಂದ ಸತತ 21 ದಿನಗಳಿಂದ ಕೋವಿಡ್‌ಗೆ ಜಿಲ್ಲೆಯಲ್ಲಿ ಯಾರೂ ಬಲಿಯಾಗಿಲ್ಲ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News