ಸಿಎಂ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಯತ್ನ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ

Update: 2020-11-28 14:50 GMT

ಬೆಂಗಳೂರು, ನ.28: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶನಿವಾರ ನಗರದ ರೇಸ್‍ಕೋರ್ಸ್ ರಸ್ತೆ ಕಾಂಗ್ರೆಸ್ ಮುಂಭಾಗ ಬಿಬಿಎಂಪಿ ಮಾಜಿ ಮೇಯರ್ ರಾಮಚಂದ್ರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಸಂತೋಷ್ ಆತ್ಮಹತ್ಯೆಗೆ ಪ್ರಯತ್ನಿಸಲು ಸತ್ಯ ಕಾರಣವೇನೆಂದು ತಿಳಿಯಬೇಕು. ಹಾಗಾಗಿ ಕೂಡಲೇ ಇದನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News