ಡ್ರಗ್ಸ್ ದಂಧೆ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಮೆಟ್ಟಿಲೇರಿದ ನಟಿ ರಾಗಿಣಿ ದ್ವಿವೇದಿ

Update: 2020-11-28 15:06 GMT

ಬೆಂಗಳೂರು, ನ.28: ಡ್ರಗ್ಸ್ ಸೇವನೆ ಹಾಗೂ ಪೂರೈಕೆ ಜಾಲದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಬಂಧಿಯಾಗಿ ಪರಪ್ಪನ ಅಗ್ರಹಾರದಲ್ಲಿ ಸೆರೆವಾಸ ಅನುಭವಿಸುತ್ತಿರುವ ನಟಿ ರಾಗಿಣಿ ದ್ವಿವೇದಿ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ.3ರಂದು ಜಾಮೀನು ನಿರಾಕರಿಸಿ ನೀಡಿರುವ ಆದೇಶವನ್ನು ಪ್ರಶ್ನಿಸಿ ನಟಿ ರಾಗಿಣಿ ದ್ವಿವೇದಿ ಪರ ವಕೀಲರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಡಿ.4ರಂದು ನಡೆಯಲಿದೆ.

ಇದೇ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಕೋರಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ದಿನಾಂಕ ಇನ್ನೂ ನಿಗದಿಯಾಗಿಲ್ಲ.

ಡ್ರಗ್ಸ್ ಸೇವನೆ ಹಾಗೂ ಪೂರೈಕೆ ಜಾಲದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಸೆ.4ರಂದು ನಟಿ ರಾಗಿಣಿಯನ್ನು ಹಾಗೂ ನ.8ರಂದು ನಟಿ ಸಂಜನಾ ಗಲ್ರಾನಿ ಅವರನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News