ಯೋಗಾಭ್ಯಾಸದಿಂದ ಸಾಮಾನ್ಯ ಕಾಯಿಲೆ ತಡೆಗಟ್ಟಲು ಸಾಧ್ಯ: ಡಿಸಿ ಜಗದೀಶ್

Update: 2020-11-28 15:24 GMT

ಕುಂದಾಪುರ, ನ. 28: ಸೌಮ್ಯವಾದ ವ್ಯಾಯಾಮವಾಗಿರುವ ಯೋಗಾಸನವು ಮನಸ್ಸನ್ನು ಶಾಂತಗೊಳಿಸುತ್ತದೆ. ಅದೇ ರೀತಿ ಸಾಮಾನ್ಯ ಕಾಯಿಲೆಗಳನ್ನು ಯೋಗಾಭ್ಯಾಸದಿಂದ ತಡೆಗಟ್ಟಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ, ತಾಲೂಕು ಆಯುಷ್ ಘಟಕಗಳ ಆಶ್ರಯದಲ್ಲಿ ರೋಟರಿ ಕುಂದಾಪುರ ರಿವರ್ ಸೈಡ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಮಿನಿ ವಿಧಾನ ಸೌಧದ ಆವರಣದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಯೋಗ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಯೋಗ ಭಾರತೀಯ ಸಂಸ್ಕೃತಿಯಲ್ಲಿ ಅಮೂಲ್ಯವಾದ ಪದ್ಧತಿ. ಯೋಗ, ವಿಜ್ಞಾನ, ತಂತ್ರಜ್ಞಾನ, ಗಣಿತ ಸೇರಿದಂತೆ ಹಲವು ವಲಯ ಗಳಲ್ಲಿ ಭಾರತವು ಜಗತ್ತಿಗೆ ಮಹತ್ತರ ಕೊಡುಗೆಯನ್ನು ನೀಡಿದೆ. ಆಧ್ಯಾತ್ಮ ಯೋಗದ ಒಂದು ಭಾಗ. ನಮಗೆ ಏಕಾಗ್ರತೆ, ಸಕಾರಾತ್ಮಕ ಯೋಚನೆ ಮಾಡಲು ಮತ್ತು ಲವಲವಿಕೆ ಯಿಂದಿರಲು ಸಹಾಯ ಮಾಡುತ್ತವೆ ಎಂದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು, ಕುಂದಾಪುರ ತಾಲೂಕು ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ನಾಗೇಶ್, ಯೋಗ ತರಬೇತುದಾರ ವಿವೇಕ ಪೈ, ಕುಂದಾಪುರ ರೆಡ್‌ಕ್ರಾಸ್ ಅಧ್ಯಕ್ಷ ಜಯಕರ ಶೆಟ್ಟಿ ಉಪಸ್ಥಿತರಿದ್ದರು.

ಡಾ.ಶಿಲ್ಪಯೋಗದ ವಿವಿಧ ಆಸನಗಳು, ಪ್ರಾಣಾಯಾಮಗಳನ್ನು ಮಾಡುವ ಮೂಲಕ ಪ್ರಾತ್ಯಕ್ಷಿಕೆಯೊಂದಿಗೆ ತರಬೇತಿ ನೀಡಿದರು. ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿಗಳು ದಂಪತಿಗಳೊಂದಿಗೆ ಆಗಮಿಸಿ ಯೋಗಾಭ್ಯಾಸ ಮಾಡಿದರು.

ರೋಟರಿ ಅಧ್ಯಕ್ಷ ಕೌಶಿಕ್ ಯಡಿಯಾಳ್ ಸ್ವಾಗತಿಸಿದರು. ತಾಲೂಕು ಆರೋಗ್ಯ ಅಧಿಕಾರಿ ಡಾ.ನಾಗಭೂಷಣ ಉಡುಪ ಪ್ರಸ್ತಾವಿಕ ವಾಗಿ ಮಾತನಾಡಿ ದರು. ಹಿರಿಯ ವೈದ್ಯಾಧಿಕಾರಿ ಡಾ.ಅಶೋಕ್ ಎಚ್. ವಂದಿಸಿದರು. ವೈದ್ಯಾಧಿ ಕಾರಿ ಡಾ.ವೀಣಾ ಕಾರಂತ್ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ 150 ಜನ ವಿವಿಧ ಇಲಾಖೆಯ ನೌಕರರು ಮತ್ತು ಸಾರ್ವಜನಿಕರು ಪಾಲ್ಗೊಂಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News