ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಿಂದ ಡಿಸಿಎಂ ಭೇಟಿ

Update: 2020-11-28 15:27 GMT

ಮಂಗಳೂರು, ನ.28: ಮಂಗಳೂರು ವಿವಿಯಲ್ಲಿ ಸಿಂಡಿಕೇಟ್ ಸದಸ್ಯರು ವ್ಯವಸ್ಥೆಯ ಸುಧಾರಣೆ ಹಾಗೂ ವಿವಿಯ ಅಭಿವೃದ್ಧಿ ಬಗ್ಗೆ ವಿಶೇಷ ಪ್ರಯತ್ನ ಪಡುತ್ತಿರುವ ಕುರಿತು ಮಂಗಳೂರಿನಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ವಿಶ್ವವಿದ್ಯಾನಿಲಯದಲ್ಲಿನ ಈ ಹಿಂದಿನ ಭ್ರಷ್ಟಾಚಾರದ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು. ಇದನ್ನು ಸರಿಪಡಿಸುವ ಕುರಿತಂತೆ ಸಿಂಡಿಕೇಟ್ ಸದಸ್ಯರ ಯೋಜನೆ ಅವರಿಗೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ವಿವಿಯಲ್ಲಿ ಈಗಾಗಲೇ ಸಿಂಡಿಕೇಟ್ ಸದಸ್ಯರು ಹಲವು ಬದಲಾವಣೆಯನ್ನು ಮಾಡಲು ಮುಂದಾಗಿರುವುದು ಶ್ಲಾಘನೀಯ. ಸರಕಾರವು ಮಂಗಳೂರು ವಿವಿಗೆ ಸಂಪೂರ್ಣ ಸಹಕಾರ ನೀಡಬೇಕೆಂದು ತಿಳಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪರೀಕ್ಷಾ ಸುಧಾರಣೆಗೋಸ್ಕರ ಸಿಂಡಿಕೇಟ್ ಸದಸ್ಯರು ಹೊರಗುತ್ತಿಗೆ ಸಂಸ್ಥೆ ಬದಲು ವಿವಿಯಿಂದಲೇ ಪರೀಕ್ಷಾ ಉಚಿತ ಸಾಫ್ಟ್‌ವೇರ್ ರಚಿಸುವಂತೆ ನೀಡಿರುವ ಪ್ರಸ್ತಾವನೆಯ ಪರಿಣಾಮ ಹೊಸ ಉಚಿತ ಪರೀಕ್ಷಾ ಸಾಫ್ಟ್‌ವೇರ್ ಕಾರ್ಯವು ಪ್ರಗತಿಯಲ್ಲಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಮಂಗಳೂರು ವಿವಿ ಶೈಕ್ಷಣಿಕ ಮಂಡಳಿಯ ಸದಸ್ಯರು ಹಾಗೂ ಶಾಸಕ ಡಾ.ಭರತ್ ಶೆಟ್ಟಿ, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರಮೇಶ್ ಕೆ., ರವಿಚಂದ್ರ ಪಿ.ಎಂ., ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಜಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News