ಸಂತೋಷ್ ಪ್ರಕರಣ ತನಿಖೆಗೆ ಕೊಡದಿದ್ದರೆ ಹೋರಾಟ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್

Update: 2020-11-28 15:42 GMT

ಬೆಂಗಳೂರು, ನ.28: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣವನ್ನು ತನಿಖೆಗೆ ಕೊಡದಿದ್ದರೆ ಕಾಂಗ್ರೆಸ್ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನ ಸುಲಭದ್ದಲ್ಲ. ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ರಾಜಕೀಯ ಒತ್ತಡವಿದೆ. ಯಾವುದೋ ಸಿಡಿಯಿಂದ ಈ ರೀತಿ ಆಗಿದೆಯಂತೆ. ಇದರ ಬಗ್ಗೆ ವಿಶೇಷ ತಂಡದಿಂದ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಸಂತೋಷ್ ಆತ್ಮಹತ್ಯೆ ಯತ್ನದ ಬಗ್ಗೆ ಈಗಾಗಲೇ ಸಾಕಷ್ಟು ಮಾಹಿತಿಗಳು ಹರಿದು ಬರುತ್ತಿವೆ. ಇದರ ಬಗ್ಗೆ ಕೂಡಲೇ ತನಿಖೆಯಾಗಬೇಕು. ಅದರ ಹಿಂದಿರುವ ಸತ್ಯಾಂಶ ಹೊರಬರಬೇಕು. ತನಿಖೆಗೆ ಕೊಡದೇ ಹೋದರೆ ತಪ್ಪು ಸಾಬೀತಾದಂತೆ. ಒಂದು ವೇಳೆ ತನಿಖೆಗೆ ಕೊಡದಿದ್ದರೆ ಕಾಂಗ್ರೆಸ್ ಹೋರಾಟ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News