ವಿವಾಹವಾಗುವುದಾಗಿ ನಂಬಿಸಿ ವಂಚನೆ: ಓರ್ವನ ಬಂಧನ

Update: 2020-11-28 16:05 GMT

ಬೆಂಗಳೂರು, ನ.28: ವಿವಾಹ ಆಗುವುದಾಗಿ ನಂಬಿಸಿ ವಂಚನೆ ಮಾಡುತ್ತಿದ್ದ ಓರ್ವನನ್ನು ವೈಟ್‍ಫೀಲ್ಡ್ ಸಿಇಎನ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಬ್ರೈಟ್(25) ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ ಮಾಡಿಕೊಳ್ಳುತ್ತಿದ್ದ ಆರೋಪಿ ಬಳಿಕ ಮದುವೆಯಾಗುವುದಾಗಿ ನಂಬಿಸುತ್ತಿದ್ದ. ತದನಂತರ, ವ್ಯಾಪಾರ ನೆಪದಲ್ಲಿ ಹಣ ವಸೂಲಿ ಮಾಡಿಕೊಂಡು ಯುವತಿಯರನ್ನು ವಂಚನೆ ಮಾಡುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಇತ್ತೀಚಿಗೆ ವೈಟ್‍ಫೀಲ್ಡ್ ಮೂಲದ ಯುವತಿಗೆ ಮದುವೆಯಾಗುವುದಾಗಿ ಹೇಳಿ ಸುಮಾರು 24 ಲಕ್ಷ ಹಣ ಪಡೆದು ವಂಚನೆ ಮಾಡಿದ್ದ. ಈ ಬಗ್ಗೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ತನಿಖೆ ಕೈಗೆತ್ತಿಕೊಂಡ ವೈಟ್ ಫೀಲ್ಡ್ ಸಿಇಎನ್ ಠಾಣಾ ಪೊಲೀಸರು, ಆರೋಪಿಯನ್ನು ಹೊಸದಿಲ್ಲಿ ಯಲ್ಲಿ ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News