ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಂಜಾವಧೂತ ಸ್ವಾಮೀಜಿ ಆಗ್ರಹ

Update: 2020-11-28 16:43 GMT

ಬೆಂಗಳೂರು, ನ.28: ಲಿಂಗಾಯತ ಅಭಿವೃದ್ಧಿ ನಿಗಮ ಮಾಡಿದಂತೆ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ನಂಜಾವಧೂತ ಸ್ವಾಮೀಜಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಜನಸಂಖ್ಯೆಯಲ್ಲಿ ಅತಿದೊಡ್ಡ ಸಮುದಾಯವಾಗಿ ಒಕ್ಕಲಿಗರಿದ್ದಾರೆ. ಅವರ ಭಾವನೆ ಹಾಗೂ ಅನಿಸಿಕೆಗಳನ್ನು ಸರಕಾರಕ್ಕೆ ತಿಳಿಸುವುದು ಅನಿವಾರ್ಯ. ಒಕ್ಕಲಿಗ ಸಮುದಾಯ ಸರ್ವರಿಗೂ ಸಮಪಾಲು ಕೊಟ್ಟಿದೆ. ನಮ್ಮ ಸಮುದಾಯದಲ್ಲೂ ಕೂಡ ಬಡತನ ರೇಖೆಗಿಂತ ಕೆಳಗಿರುವವರು ಹೆಚ್ಚಿನ ಜನರಿದ್ದು, ಸರಕಾರ ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ.

ಬಸವಣ್ಣನವರ ಆಶಯದಂತೆ ಸರಕಾರ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಲಾಗಿದೆ. ಅದೇ ರೀತಿ ಹಿಂದುಳಿದ ಇತರೆ ಸಮುದಾಯಗಳನ್ನು ಗಮನಿಸಬೇಕು. ಈ ನಿಟ್ಟಿನಲ್ಲಿ ಒಕ್ಕಲಿಗ ಸಮುದಾಯವೂ ಸಾಕಷ್ಟು ಸಮಸ್ಯೆಗಳಿಂದ ಕೂಡಿದ್ದು, ಕೆಲವರು ಬದುಕಲು ಕಷ್ಟಪಡುತ್ತಿದ್ದಾರೆ. ಅವರಿಗೆ ಸಹಾಯ ಮಾಡಲು ಸರಕಾರ ಒಕ್ಕಲಿಗ ಅಭಿವೃದ್ಧಿ ನಿಗಮ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಒಕ್ಕಲಿಗ ಸಮುದಾಯಕ್ಕೂ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದರು. ಇದೀಗ ಸರಕಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ಒಂದು ಸಾವಿರ ಕೋಟಿ ಅನುದಾನ ಮೀಸಲಿಡಬೇಕು ಮತ್ತು ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸುವ ಮಾದರಿ ಒಕ್ಕಲಿಗ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News