ನಿವೇಶನ ರಹಿತರ ಅನಿರ್ಧಿಷ್ಟಾವಧಿ ಧರಣಿ 6ನೇ ದಿನಕ್ಕೆ: ಉಸ್ತುವಾರಿ ಸಚಿವ ನಾರಾಯಣಗೌಡರಿಗೆ ಘೇರಾವ್ ಎಚ್ಚರಿಕೆ

Update: 2020-11-28 17:04 GMT

ಮಂಡ್ಯ. ನ.28: ತಾಲೂಕಿನ ಹಳೇಬೂದನೂರು ಗ್ರಾಪಂ ವ್ಯಾಪ್ತಿಯ ನಿವೇಶನ ರಹಿತರು ಸ್ವಂತ ಸೂರಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಶನಿವಾರ ಆರನೇ ದಿನಕ್ಕೆ ಕಾಲಿರಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರಿಗೆ ಘೇರಾವ್ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಸ್ವಂತ ಮನೆ ನಮ್ಮ ಹಕ್ಕು ಸಂಘಟನೆ ಸಂಚಾಲಕ ಎಂ.ಬಿ.ನಾಗಣ್ಣಗೌಡ, ಸ್ವಂತ ಸೂರಿಗಾಗಿ ಜಿಲ್ಲಾದ್ಯಂತ ಸಾಕಷ್ಟು ಹೋರಾಟಗಳು ನಡೆದಿವೆ. ಬೂದನೂರು ಗ್ರಾಪಂ ವ್ಯಾಪ್ತಿಯ ನಿವೇಶನರಹಿತರು ಕಳೆದ ಆರು ದಿನಗಳಿಂದ ಧರಣಿ ನಡೆಸುತ್ತಿದ್ದರೂ ಜಿಲ್ಲಾಡಳಿತವಾಗಲಿ, ಉಸ್ತುವಾರಿ ಸಚಿವರಾಗಲಿ ಸಕರಾತ್ಮಕ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಆಗಸ್ಟ್ 15ರಂದು ನಗರದ ಸಂಜಯ ವೃತ್ತದಲ್ಲಿ ಧರಣಿ ನಡೆಸಿದ ಸಂಧರ್ಭದಲ್ಲಿ ಭೇಟಿ ನೀಡಿ ಅಹವಾಲು ಸ್ವೀಕರಿಸಿದ ಉಸ್ತುವಾರಿ ಸಚಿವ ಕೆ.ಸಿ.ನಾರಯಣಗೌಡರು, ಹದಿನೈದು ದಿನಗಳೊಳಗೆ ವಸತಿ ಸಂಬಂಧ ಜಂಟಿ ಸಭೆ ನಡೆಸುವ ಭರವಸೆ ನೀಡಿ ಮೂರು ತಿಂಗಳು ಕಳೆದರೂ ಯಾವುದೆ ಸಭೆ ಆಯೋಜಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಕಾಲಮಿತಿಯೊಳಗೆ ವಸತಿರಹಿತರ ಸಮಸ್ಯೆ ಬಗೆಹರಿಸದಿದ್ದಲ್ಲಿ ಉಸ್ತುವಾರಿ ಸಚಿವರಿಗೆ ಘೇರಾವ್ ಹಾಕಲಾಗುವುದು ಎಂದು ಅವರು ಎಚ್ಚರಿಸಿದರು.

ಧರಣಿಯಲ್ಲಿ ಗಾಣದಾಳು ಅಭಿಲಾಶ್, ಗ್ರಾಪಂ ಮಾಜಿ ಸದಸ್ಯ ಬಿ.ಕೆ.ಸತೀಶ್, ಸುನೀಲ್, ಪ್ರೇಮಾ, ಪದ್ಮಾ, ಮಹದೇವಿ, ಇತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News