ಮಂಗಳೂರಲ್ಲಿ ಮತ್ತೆ ವಿವಾದಾತ್ಮಕ ಗೋಡೆ ಬರಹ

Update: 2020-11-29 06:59 GMT

ಮಂಗಳೂರು: ನಗರದ ಮತ್ತೊಂದು ಕಡೆ ಗೋಡೆ ಬರಹವೊಂದು ಕಾಣಿಸಿಕೊಂಡಿರುವ ಮತ್ತಷ್ಟು ಆಂತಕಕ್ಕೆ ಕಾರಣವಾಗಿದೆ.

ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯಲ್ಲಿ ಈ ಬರಹ ಕಂಡುಬಂದಿದೆ.

ಕೋರ್ಟ್ ಆವರಣದ ಜನರೇಟರ್ ಗೋಡೆಯ ಮೇಲೆ "Gustak e rasool ek hi saza tan say juda" ಎಂದು ಬರೆಯಲಾಗಿದೆ.

ಈ ಬಗ್ಗೆ ಬಂದರ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ‌ನೀಡಿ ಪರಿಶೀಲನೆ‌ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಬಿಜೈನ ಅಪಾರ್ಟ್‌ಮೆಂಟ್ ವೊಂದರಲ್ಲಿ ಉಗ್ರರ‌ ಪರ ಗೋಡೆ ಬರಹ ಕಾಣಿಸಿಕೊಂಡಿತ್ತು. ಪೊಲೀಸರು ಕಾರ್ಯಾಚರಣೆಗೆ ಇಳಿದ ಬೆನ್ನಲ್ಲೇ ಮತ್ತೊಂದು ಕಡೆ ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News